ಕಲ್ಪ ಮೀಡಿಯಾ ಹೌಸ್ | ಸುಬ್ರಹ್ಮಣ(ದಕ್ಷಿಣ ಕನ್ನಡ) |
ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯ #KukkeSubramanya ದೇವಾಲಯಕ್ಕೆ ಭೇಟಿ ನೀಡಿದ ಬೆನ್ನಲ್ಲೇ ದಕ್ಷಿಣ ಭಾರತದ ಖ್ಯಾತ ನಟ ಪ್ರಭುದೇವ #ActorPrabhudev ಅವರು ಕುಟುಂಬ ಸಹಿತ ಶ್ರೀಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
Also Read: ಸರ್ವ ದಿಶೆಯಲ್ಲೂ ಸ್ಯಾಂಡಲ್ ವುಡ್ ಬದಲಾವಣೆ ಕಂಡಿದೆ | ನಟ ಅನಂತನಾಗ್ ಅನಿಸಿಕೆ
ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು.

ಬಳಿಕ ಸುಬ್ರಹ್ಮಣ್ಯ ಮಠಕ್ಕೆ ಭೇಟಿ ನೀಡಿ, ಅಲ್ಲಿನ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರಿಂದ ಮಂತ್ರಾಕ್ಷತೆ ಪಡೆದರು.
Also Read>> ಗಮನಿಸಿ! ಜೋಗಕ್ಕೆ ಹೋಗೋ ಪ್ಲಾನ್ ಮಾಡ್ತಿದಿರಾ? ಏಪ್ರಿಲ್ 20ರವರೆಗೂ ಪ್ರವೇಶವಿಲ್ಲ
ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್, ಮುಂತಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post