ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಮನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದಲ್ಲಿ ನಡೆದಿದೆ.
ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು ಗುರುತಿಸಲಾಗಿದ್ದು, ಅಬೂಬಕ್ಕರ್ ಎಂಬುವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಕುಸಿತವಾಗಿದೆ. ಮನೆಯಲ್ಲಿ ಮಲಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬಾಲಕಿ ಮೃತದೇಹಕ್ಕಾಗಿ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post