ಕಲ್ಪ ಮೀಡಿಯಾ ಹೌಸ್ | ಕಡಬ (ದಕ್ಷಿಣ ಕನ್ನಡ) |
ಕಾರು ಹಾಗೂ ತೂಫಾನ್ ಜೀಪ್‌ನ ನಡುವು ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಪರಿಣಾಮವಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಬಳಿಯಲ್ಲಿ ನಡೆದಿದೆ.
ಬೇಲೂರಿನಿಂದ ಸುಬ್ರಹ್ಮಣ್ಯದ ಕಡೆಗೆ ಪ್ರಯಾಣಿಸುತ್ತಿದ್ದ ಕಾರು, ಸುಬ್ರಹ್ಮಣ್ಯ ಕಡೆಯಿಂದ ಬರುತ್ತಿದ್ದ ತೂಫಾನ್ ವಾಹನದ ನಡುವೆ ಬಿಳಿನೆಲೆ ಎಂಬಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಇಬ್ಬರು ಪುರುಷರು, ಓರ್ವ ಮಹಿಳೆ ಹಾಗೂ ಪುಟ್ಟ ಮಗು ಸ್ಥಳದಲ್ಲೇ ಮೃತಪಟ್ಟಿದೆ.
ತೂಪಾನ್‌ನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಗಾಯಗಳಾಗಿದ್ದು, ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.











Discussion about this post