ಕಲ್ಪ ಮೀಡಿಯಾ ಹೌಸ್ | ಮಂಗಳೂರು |
ಖಾಸಗಿ ಶಾಲಾ ಬಸ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿ, ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.
ಮೃತರನ್ನು ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾದ ಅಭಿಷೇಕ್ ಮತ್ತು ಪ್ರೀತೇಶ್ ಎಂದು ಗುರುತಿಸಲಾಗಿದೆ. ಮೂವರು ಬೈಕ್‌ನಲ್ಲಿ ಕಾಲೇಜಿಗೆ ಹೋಗುತ್ತಿದ್ದಾಗ ಅವಘಡ ಸಂಭವಿಸಿದೆ. ಮಂಜೇಶ್ವರದ ಮೀಯಪದವು ಎಂಬಲ್ಲಿ ಈ ದುರ್ಘಟನೆ ನಡೆದಿದೆ.
ಮೃತರನ್ನು ಮೀಯಪದವು ಸೇವಾ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾದ ಪೂರ್ಣಿಮಾ ಶೆಟ್ಟಿ ಮತ್ತು ಹರೀಶ್ ಶೆಟ್ಟಿ ದಂಪತಿಯ ಪುತ್ರ ಪ್ರೀತೇಶ್ ಶೆಟ್ಟಿ (18) ಎಂದು ಗುರುತಿಸಲಾಗಿದೆ. ಅಭಿಷೇಕ್ ಭಂಡಾರಿ (18) ಮೀಯಪದವಿನ ದಿನಗೂಲಿ ಕಾರ್ಮಿಕರಾದ ಸುರೇಶ್ ಭಂಡಾರಿ ಮತ್ತು ಹರಿಣಾಕ್ಷಿ ಭಂಡಾರಿ ದಂಪತಿಯ ಪುತ್ರರಾಗಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಯನ್ನು ದಿನಗೂಲಿ ಕಾರ್ಮಿಕ ವಿಶ್ವನಾಥ ಶೆಟ್ಟಿ ಮತ್ತು ಮೀನಾಕ್ಷಿ ದಂಪತಿಯ ಪುತ್ರ ನಮಿತ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















