ಕಲ್ಪ ಮೀಡಿಯಾ ಹೌಸ್ | ಸುರತ್ಕಲ್ |
ಬಿಜೆಪಿ ಕಾರ್ಯಕರ್ತ ಪ್ರವೀಣ್ ಹತ್ಯೆಯ ಕರಿನೆರಳ ಬೆನ್ನಲ್ಲೇ ನಗರದಲ್ಲಿ ಫಾಜಿಲ್ ಎಂಬ ಯುವಕನನ್ನು ನಡು ರಸ್ತೆಯಲ್ಲೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.
ಇಂದು ಸಂಜೆ 8 ಗಂಟೆ ವೇಳೆಗೆ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಅಂಗಡಿಯೊಂದರಿಂದ ಸ್ನೇಹಿತನ ಜೊತೆಗೆ ಹೊರಕ್ಕೆ ಬರುತ್ತಿದ್ದ ಫಾಜಿಲ್ ಮೇಲೆ ನಾಲ್ಕೈದು ಮಂದಿ ಏಕಾಏಕಿ ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿದ್ದು, ಪರಿಣಾಮವಾಗಿ ಆತ ಸ್ಥಳದಲ್ಲೇ ಕುಸಿದುಬಿದ್ದು ಸಾವನ್ನಪ್ಪಿದ್ದಾನೆ.
ಫಾಜಿಲ್ ಹತ್ಯೆ ದೃಶ್ಯ ಅಲ್ಲಿನ ಅಂಗಡಿಯೊಂದರ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಅವುಗಳು ಎಂತಹವರನ್ನೂ ಬೆಚ್ಚಿ ಬೀಳಿಸುವಂತಿದೆ.
ನಿಷೇಧಾಜ್ಞೆ ಜಾರಿ
ಇನ್ನು, ಘಟನೆ ಹಿನ್ನೆಲೆಯಲ್ಲಿ ಮಾತನಾಡಿರುವ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಫಾಜಿಲ್ ಮೇಲೆ ಏಕಾಏಕಿ ದಾಳಿ ನಡೆಸಲಾಗಿದ್ದು, ಆತನನ್ನು ಆಸ್ಪತ್ರೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ದುಷ್ಕರ್ಮಿಗಳ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆಯಿಂದಷ್ಟೇ ಮಾಹಿತಿ ತಿಳಿದುಬರಬೇಕಿದೆ ಎಂದಿದ್ದಾರೆ.
ಇನ್ನು, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜ್ಪೆ, ಪಣಂಬೂರು ಹಾಗೂ ಮುಲ್ಕಿ ಠಾಣೆ ವ್ಯಾಪ್ತಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post