ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ರಾಜ್ಯದ ಹಲವು ಕಡೆಗಳಲ್ಲಿ ಮಳೆ ಚುರುಕುಗೊಂಡ ಬೆನ್ನಲ್ಲೇ, ಕರಾವಳಿಯ 2 ಜಿಲ್ಲೆ ಹಾಗೂ ಕೊಡಗಿನಲ್ಲಿ ಇಂದು ರೆಡ್ ಅಲರ್ಟ್ #Red Alert ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳಲ್ಲಿ ಗಾಳಿಯೂ 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ #Orange Alert ಘೋಷಿಸಿದೆ.
ಜೊತೆಗೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post