ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಿಸಿರುವ ಹಿನ್ನೆಲೆ ದಕ್ಷಿಣ ಕನ್ನಡ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ, ನಳಿನ್ ಕುಮಾರ್ ಕಟೀಲ್ ಹಾಗೂ ಸಂಪುಟ ಸಚಿವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎಮ್. ಸುದರ್ಶನ್, ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಂಜುನಾಥ್. ಎಸ್‌ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚೆನ್ನಕೇಶವ ಅರಸಮಜಲ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷ ವಿನಯ ನೇತ್ರ, ರಾಜ್ಯ ಎಸ್.ಟಿ. ಮೋರ್ಚಾ ಜಿಲ್ಲಾ ಮಾಧ್ಯಮ ಸಂಚಾಲಕ ಜಯರಾಮ್ ನಾಯ್ಕ್ ಕುಂಟ್ರಕಲ, ಪ್ರಮುಖರಾದ ಕೊರಗಪ್ಪ ನಾಯ್ಕ್, ಗಣೇಶ್ ಹೊಸಬೆಟ್ಟು, ಪ್ರಭಾ ಮಾಲಿನಿ, ಪೂಜಾ ಪೈ, ಭರತ್ ಕುಮಾರ್, ಮಂಗಳ ಆಚಾರ್ಯ, ವಿಜಯಕುಮಾರ್ ಶೆಟ್ಟಿ, ರೂಪ ಬಂಗೇರ, ಪ್ರೇಮನಂದ ಶೆಟ್ಟಿ, ಮತ್ತು ಮಂಗಳೂರು ಮಹಾನಗರ ಪಾಲಿಕೆ ಸದಸ್ಯರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಹಾಗು ಕ್ಷೇತ್ರ ಎಸ್.ಟಿ. ಎಸ್.ಸಿ. ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
Also read: ಅನಂತಪುರ ದೇವಾಲಯದ ಸಂಪೂರ್ಣ ಸಸ್ಯಹಾರಿ ಮೊಸಳೆ ಬಬಿಯಾ ವಿಧಿವಶ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post