ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ/ಶಿವಮೊಗ್ಗ |
ಈಗಾಗಲೇ ನಿರಂತರ ಮಳೆಯಿಂದಾಗಿ ತತ್ತರಿಸಿರುವ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಜುಲೈ 14ರವರೆಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಜುಲೈ 14ರವರೆಗೂ ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜುಲೈ 12: ಉಳಿದಂತೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮಾತ್ರವಲ್ಲದೇ ಹಾವೇರಿ, ಧಾರವಾಡ, ಬೆಳಗಾಂ, ಗುಲ್ಬರ್ಗಾ, ಬೀದರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಮತ್ತು ಮೈಸೂರು, ಹಾಸನ, ಗದಗ, ಬಾಗಲಕೋಟೆ, ಬಿಜಾಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.
Also read: ಅಪ್ರಾಪ್ತ ಬಾಲಕಿಯ ಮೇಲೆ 5 ತಿಂಗಳು ಸಾಮೂಹಿಕ ಅತ್ಯಾಚಾರ ಎಸಗಿದ ರಾಕ್ಷಸರು
ಜುಲೈ 13: ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾಂ, ಬಾಗಲಕೋಟೆ, ಕೊಪ್ಪಳ, ಬಿಜಾಪುರ ಹಾಗೂ ಗುಲ್ಬರ್ಗಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.
ಜುಲೈ 14: ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.
ಜುಲೈ 15: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post