ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ನ್ಯಾಯಾಲಯ ಹಾಗೂ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ನಿರಂತರವಾಗಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ Hijab ಧರಿಸಿ ಆಗಮಿಸುತ್ತಿರುವುದು ವಿವಾದಕ್ಕೆ ಕಾರಣವಾಗಿದೆ.
ಹಿಜಾಬ್ ಧರಿಸಿ ತರಗತಿಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ನೋಟೀಸ್ ಅಂಟಿಸಿದ್ದರೂ ಸಹ ಅದನ್ನು ಲೆಕ್ಕಿಸಿದೇ ನಿರಂತರವಾಗಿ ಮೂರು ದಿನಗಳಿಂದ ಹಿಜಾಬ್ ಧರಿಸಿ ಆಗಮಿಸುತ್ತಿದ್ದಾರೆ. ಇದನ್ನು ವಿರೋಧಿಸಿ ಬಹಳಷ್ಟು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ನ್ಯಾಯಾಲಯದ ಆದೇಶದಂತೆ ತರಗತಿಗಳಲ್ಲಿ ಹಿಜಾಬ್ ಧರಿಸಿ ತರಗತಿಯಲ್ಲಿ ಪಾಲ್ಗೊಳ್ಳಲು ಅವಕಾಶವಿಲ್ಲ ಎಂದು ಪ್ರಾಂಶುಪಾಲರು ಮನವೊಲಿಸುವ ಪ್ರಯತ್ನ ಮಾಡಿದರೂ ಇದಕ್ಕೆ ವಿದ್ಯಾರ್ಥಿನಿಯರು ಬೆಲೆ ನೀಡಿಲ್ಲ ಎಂದು ವರದಿಯಾಗಿದೆ.
ಇನ್ನು, ಹಿಜಾಬ್ ಧರಿಸಿ ಆಗಮಿಸಿದ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post