ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಮನೆಯಿಂದ ಕೆಲಸಕ್ಕೆಂದು ಹೋಗಿ ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಸುಳ್ಯ ತಾಲೂಕಿನ ಪಂಜದಿಂದ ವರದಿಯಾಗಿದೆ.
ಇಲ್ಲಿನ ಸಮೀಪದ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ ಶವವಾಗಿ ಪತ್ತೆಯಾದ ವ್ಯಕ್ತಿ. ಅವರು ಜ.16 ರಂದು ಮುಂಜಾನೆ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ಬಳಿಕ ಅವರು ಮನೆಗೆ ವಾಪಾಸಾಗದ ಕಾರಣ ಮನೆಯವರು ಹುಡುಕಾಟ ನಡೆಸಿದ್ದರು.
ಜ.19 ಕೂತ್ಕುಂಜ ಗ್ರಾಮದ ಸಂಪ ಎಂಬಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದು ಮನೆಯವರು ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ ಪಡಿಸಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾವಿನ ಕುರಿತು ಪೋಲೀಸ್ ತನಿಖೆ ನಡೆಸಲಾಗುತ್ತಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















