ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ/ಉತ್ತರ ಕನ್ನಡ |
ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು #Medical College at Puttur ಹಾಗೂ ಉತ್ತರ ಕನ್ನಡದ ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ #Multi Specialty Hospital at Karawara ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಘೋಷಿಸಿದ್ದಾರೆ.
ಬಜೆಟ್ #State Budget ಭಾಷಣದಲ್ಲಿ ಮಾತನಾಡಿರುವ ಅವರು, ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾದೆ ಎಂದು ತಿಳಿಸಿದ್ದಾರೆ.
ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ
ಇನ್ನು, ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಸೌಕರ್ಯವನ್ನು ಇನ್ನಷ್ಟು ಸದೃಢಗೊಳಿಸಲು ಕೆಳಕಂಡ ಪ್ರಮುಖ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ ಎಂದಿದ್ದಾರೆ.
ಇದಕ್ಕೆ ಪೂರಕವಾಗಿ, ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಆರೋಗ್ಯ ಇಲಾಖೆಗೆ ದೊರೆತಿದ್ದು…
- ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿe್ಞÁನ ವಿವಿ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮ
- ವಿಜಯಪುರ ಮತ್ತು ಕೋಲಾರ ಜಿ¯್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತÈತ ಯೋಜನಾ ವರದಿ
- ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪನೆ
ವಿಜಯನಗರ ಮತ್ತು ಕೊಪ್ಪಳ ಜಿ¯್ಲÉಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ.

- ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಜಿಬಿಎ ಸಹಯೋಗದೊಂದಿಗೆ ಸ್ಥಾಪನೆ
- ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐವಿಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ
- ವಿಕ್ಟೋರಿಯಾ ಆಸ್ಪತ್ರೆ ಇನ್ನು ಶಾಂತವೇರಿ ಗೋಪಾಲಗೌಡ ಆಸ್ಪತ್ರೆ
- ಬೆಂಗಳೂರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ಮತ್ತು ಬಿಡಿಎಸ್ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.
- ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ 92 ಕೋಟಿ ರೂ. ವೆಚ್ಚದ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣ
- 236 ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು
- ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾAಗ ಕಸಿ ಆಸ್ಪತ್ರೆಯನ್ನು ನಿರ್ಮಿಸಲು ಒಡಂಬಡಿಕೆ
- 2026-27ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನ. ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಅನುದಾನ ಮೀಸಲು.
- ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















