ಕಲ್ಪ ಮೀಡಿಯಾ ಹೌಸ್
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕೋವಿಡ್-19ರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಮಾರ್ಗಸೂಚಿಯನ್ನು ನೀಡಿದ ಮೇರೆಗೆ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ವಾರಾಂತ್ಯದಲ್ಲಿ ದೇವರ ದರ್ಶನವನ್ನು ನಿರ್ಬಂಧಿಸಲಾಗಿದೆ.
ಆಗಸ್ಟ್ 5ರಿಂದ 18ರವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಸೇವೆ, ಪ್ರಸಾದ, ಅನ್ನಸಂತರ್ಪಣೆ, ವಸತಿ ವ್ಯವಸ್ಥೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಲಾಗಿದೆ. ಹಾಗೂ ವಾರಾಂತ್ಯದಲ್ಲಿ (ಶನಿವಾರ/ಭಾನುವಾರ) ದೇವರ ದರ್ಶನವನ್ನೂ ನಿರ್ಬಂಧಿಸಲಾಗಿದೆ ಎಂದು ದೇವಸ್ಥಾನದ ಧರ್ಮದರ್ಶಿ ಡಾ. ವೀರೇಂದ್ರ ಹೆಗ್ಗಡೆ ಅವರ ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post