ಕಲ್ಪ ಮೀಡಿಯಾ ಹೌಸ್ | ದಾಂಡೇಲಿ |
ತಾಲ್ಲೂಕಿನ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ಕಾಳಿ ನದಿಯಲ್ಲಿ ಈಜಲು ಹೋಗಿದ್ದವನನ್ನು ಮೊಸಳೆಗಳು ಎಳೆದೊಯ್ದ ಘಟನೆಗೆ ಸಂಬಂಧಪಟ್ಟಂತೆ ವ್ಯಕ್ತಿ ಮೃತದೇಹ ಪತ್ತೆಯಾಗಿದೆ.
ಗುಜರಾತ್ ಮೂಲದ ದಾಂಡೇಲಿ ನಿವಾಸಿ ಪೀತಾಂಬರಿ ದಾಸ್ ಎಂಬಾತ ಕಾಳಿ ನದಿಯಲ್ಲಿ ಈಜಲು ತೆರಳಿದ್ದ ಎಂದು ಗುರುತಿಸಲಾಗಿದ್ದು, ದಂಡೆಯ ಮೇಲೆ ಚಪ್ಪಲಿ, ಬಟ್ಟೆಯನ್ನು ಇಟ್ಟು ನದಿಗೆ ಇಳಿದಿದ್ದ ಈತನ ಮೇಲೆ ಮೊಸಳೆಗಳುದಾಳಿ ನಡೆಸಿ ಹೊತ್ತೊಯ್ದಿತ್ತು. ಇದನ್ನು ಸ್ಥಳೀಯರು ನೋಡಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದರು. ಕೂಲಂಕುಷ ಪರಿಶೀಲನೆಯ ತರುವಾಯ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
Also read: ಅಶೋಕ್ ಪ್ರಭು ಹಲ್ಲೆ ಪ್ರಕರಣ: ಇನ್ನೋರ್ವ ಆರೋಪಿ ಬಂಧನ












Discussion about this post