ಕಲ್ಪ ಮೀಡಿಯಾ ಹೌಸ್
ದಾವಣಗೆರೆ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಮಧ್ಯಾಹ್ನ ದಾವಣಗೆರೆಯ ಜಿ.ಎಂ.ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ ಮೂವರು ಸ್ವಾತಂತ್ರ್ಯ ಹೋರಾಟಗಾರರಾದ ಬಿ. ಎಂ. ಶಿವಲಿಂಗಸ್ವಾಮಿ, ಎಚ್. ಮರುಳಸಿದ್ದಪ್ಪ, ತಿರುವಳ್ಳಿ ಶೆಟ್ರ ಸಿದ್ದರಾಮಪ್ಪ ಅವರನ್ನು ಸನ್ಮಾನಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಬಿ.ಎ.ಬಸವರಾಜ (ಬೈರತಿ), ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಕೃಷಿ ಸಚಿವ ಬಿ ಸಿ ಪಾಟೀಲ್, ಶಾಸಕ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಜಿಲ್ಲೆಯ ಹಲ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post