ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಚಳ್ಳಕೆರೆಯಿಂದ ದಾವಣಗೆರೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್’ವೊಂದು ನಿಯಂತ್ರಣ ತಪ್ಪಿ ಎಲೆಬೇತೂರು ಬಳಿಯಲ್ಲಿ ಅಪಘಾತಕ್ಕೀಡಾಗಿದ್ದು, ಸ್ವಲ್ಪದರಲ್ಲಿ ಭಾರೀ ಅನಾಹುತವೊಂದು ತಪ್ಪಿದೆ.
ಎಲೆಬೇತೂರು ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್, ಹಳ್ಳದ ತಡೆಗೋಡೆಗೆ ಡಿಕ್ಕಿ ಹೊಡೆದು ಅದರ ಮೇಲೆಯೇ ಅಡ್ಡಡ್ಡವಾಗಿ ಬಿದ್ದಿದೆ. ತಡೆಗೋಡೆಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ವೇಗ ಏಕಾಏಕಿ ಕಡಿಮೆಯಾಗಿ ಅಲ್ಲಿಯೇ ಬಿದ್ದ ಕಾರಣ, ಹಳ್ಳಕ್ಕೆ ಬೀಳುವುದು ತಪ್ಪಿದೆ. ಒಂದು ವೇಳೆ ತಡೆಗೋಡೆ ಇಲ್ಲದೇ ಇದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು.












Discussion about this post