ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟಿವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆಗಾಗಿ ಫಿಜಿಯೋಥೆರಪಿಸ್ಟ್‍ಗಳ ಅಗತ್ಯತೆ ಇರುವುದರಿಂದ ತಾತ್ಕಾಲಿಕವಾಗಿ ಕೆಲಸ ಮತ್ತು ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸಲು ಫಿಜಿಯೋಥೆರಪಿಸ್ಟ್‍ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಡಿ.ಪಿ.ಟಿ, ಬಿ.ಪಿ.ಟಿ ವಿದ್ಯಾರ್ಹತೆ ಪಡೆದಿರುವ ಮತ್ತು 2 ವರ್ಷ ಸೇವಾ ಅನುಭವ ಹೊಂದಿರುವ ಅಭ್ಯರ್ಥಿಗಳು ದಾಖಲೆಗಳೊಂದಿಗೆ ಸೆಪ್ಟೆಂಬರ್ 19 ರೊಳಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಜಗಳೂರು ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Also read: ಇಡೀ ಸಮುದಾಯಕ್ಕೆ ಸೇರಿದ ಮಹಾನ್ ಆದರ್ಶ ವ್ಯಕ್ತಿ ಸರ್.ಎಂ ವಿಶ್ವೇಶ್ವರಾಯ: ಮನುಕುಮಾರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















