ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಹೊಸ ವರ್ಷ ಸಂಭ್ರಮಾಚರಣೆ ದಿನವೇ ಬೈಕ್ ಅಪಘಾತದಲ್ಲಿ #Bike Accident ಯುವಕನೊಬ್ಬ ಸಾವಿಗೀಡಾಗಿರುವ #Death ಘಟನೆ ದಾವಣಗೆರೆಯಲ್ಲಿ ನಡೆದಿದೆ.
ನಗರದ ನೂತನ್ ಕಾಲೇಜ್ ಮುಂಭಾಗ ಕಳೆದ ರಾತ್ರಿ 1 ಗಂಟೆ ಸುಮಾರಿಗೆ ನಡೆದ ಬೈಕ್ ಅಪಘಾತದಲ್ಲಿ ಓರ್ವ ಯುವಕ ಬಲಿಯಾಗಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
Also read: Union Minister H.D. Kumaraswamy Holds Talks with PMO on RINL Revival
ನಿಟ್ಟುವಳ್ಳಿ ಹೊಸ ಬಡಾವಣೆಯ ಕಾರ್ತಿಕ್ (19) ಮೃತ ಯುವಕ ಎಂದು ಗುರುತಿಸಲಾಗಿದ್ದು, ಹೊಸ ವರ್ಷ ಸಂಭ್ರಮಾಚರಣೆಗೆ ಸ್ನೇಹಿತರ ಜೊತೆ ಯುವಕ ಆಗಮಿಸುತ್ತಿದ್ದ. ವೇಗವಾಗಿ ಚಲಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post