ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿ ಈ ಲೋಕಸಭಾ ಚುನಾವಣೆಯಂತೆಯೇ ಮುಂದಿನ ಎಲ್ಲ ಚುನಾವಣೆಯಲ್ಲೂ ಸಹ ಮುಂದುವರೆಯಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ #B S Yadiyurappa ಮಹತ್ವದ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮುಂದಿನ ಎಲ್ಲ ಚುನಾವಣೆಯಲ್ಲೂ ಸಹ ಮೈತ್ರಿ ಮುಂದುವರೆಯಬೇಕು ಎನ್ನುವುದು ಸ್ವತಃ ಪ್ರಧಾನಿ ನರೇಂದ್ರ ಮೋದಿ #PM Narendra Modi ಅವರ ಆಶಯವಾಗಿದೆ ಎಂದರು.
ಈಗಾಗಲೇ ನಾನು 23 ಕ್ಷೇತ್ರಗಳಲ್ಲಿ ಸಂಚಾರ ಮಾಡಿ, ಪ್ರಚಾರ ಕೈಗೊಂಡಿದ್ದೇನೆ. ಆದಷ್ಟು ಶೀಘ್ರ ಉಳಿದ ಕ್ಷೇತ್ರಗಳಿಗೂ ಸಹ ತೆರಳುತ್ತೇನೆ. ನಮಗೆ ಬೆಂಬಲ ಬಲವಾಗಿ ಇಳಿ ವಯಸ್ಸಿನಲ್ಲೂ ಸಹ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪ್ರಚಾರ ಮಾಡುತ್ತಿದ್ದಾರೆ ಎಂದರು.
Also read: ಕಾಂಗ್ರೆಸ್ ನಿಂದ ಯಾವುದೇ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಸಿಕ್ಕಿಲ್ಲ: ಬಸವರಾಜ ಬೊಮ್ಮಾಯಿ
ತಮ್ಮ ಪ್ರಧಾನಿ ಅಭ್ಯರ್ಥಿ ಯಾರು ಎಂದು ಹೇಳುವ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇಲ್ಲ. ಇಂತಹ ಪರಿಸ್ಥಿತಿಯ ನಡುವೆಯೇ ಮೋದಿಯವರು ಮತ್ತೆ 3ನೇ ಬಾರಿ ಪ್ರಧಾನಿ ಆಗಲಿದ್ದಾರೆ. ದೇಶದ ಅಭಿವೃದ್ಧಿಗಾಗಿ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಮುಂದಿನ 5 ವರ್ಷಗಳ ರೂಪುರೇಷೆಯನ್ನು ಸಿದ್ದಪಡಿಸಲಾಗಿದೆ ಎಂದರು.
ಇನ್ನು, ಬಿಜೆಪಿಗೆ ಸೆಡ್ಡು ಹೊಡೆದು ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿರುವ ಕೆ.ಎಸ್. ಈಶ್ವರಪ್ಪ ಅವರ ಕುರಿತಾಗಿ ಪಕ್ಷದ ವರಿಷ್ಠರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post