ಕಲ್ಪ ಮೀಡಿಯಾ ಹೌಸ್ | ಚನ್ನಗಿರಿ |
ಸಾಲದ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ ಕೈ ಹಿಡಿದ ಪತಿಯೇ ಪತ್ನಿಯ ಮೂಗನ್ನು ಕಚ್ಚಿ ತುಂಡರಿಸಿರುವ ಘಟನೆ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ.
ಏನಿದು ಘಟನೆ?
ಖಾಸಗೀ ಸಂಘದಿಂದ ಎರಡು ಲಕ್ಷ ರೂ. ಸಾಲ ಪಡೆದಿದ್ದ ವಿಜಯ್ ಮತ್ತು ವಿದ್ಯಾ ದಂಪತಿ ಇಬ್ಬರು ಸೇರಿ ವಾರ ವಾರ ಹಣ ಕಟ್ಟುತ್ತಿದ್ದರು. ಆದರೆ ಕಳೆದ ಎರಡು ಮೂರು ವಾರ ಹಣವಿಲ್ಲದ್ದರಿಂದ ವಿದ್ಯಾ ಸಾಲದ ಕಂತು ಪಾವತಿಸಿರಲಿಲ್ಲ ಎಂದು ಹೇಳಲಾಗಿದೆ.
ಸಾಲದ ಕಂತು ಪಾವತಿಸದ ವಿಚಾರವಾಗಿ ಸಂಘದವರು ಪತಿ ವಿಜಯ್’ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಇದೇ ವಿಚಾರವಾಗಿ ದಂಪತಿ ಮಧ್ಯೆ ದೊಡ್ಡ ಜಗಳವಾಗಿದೆ. ಜಗಳ ವಿಕೋಪಕ್ಕೆ ತೆರಳಿದ ಸಂದರ್ಭ ಪತ್ನಿ ವಿದ್ಯಾಳ ಮೂಗನ್ನೇ ಪತಿ ವಿಜಯ್ ಕಚ್ಚಿ ತುಂಡರಿಸಿದ್ದಾನೆ.
ಶಬ್ದ ಕೇಳಿ ಓಡಿ ಬಂದ ಅಕ್ಕಪಕ್ಕದವರು ಗಲಾಟೆ ಬಿಡಿಸಿದ್ದಾರೆ. ತುಂಡಾದ ಮೂಗಿನೊಂದಿಗೆ ವಿದ್ಯಾ ಚನ್ನಗಿರಿಯ ಸರ್ಕಾರಿ ಆಸ್ಪತ್ರೆಗೆ ತೆರಳಿದ್ದರು.
ಪ್ರಾಥಮಿಕ ಚಿಕಿತ್ಸೆ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಮೂಗು ಜೋಡಿಸುವ ಶಸ್ತçಚಿಕಿತ್ಸೆಗಾಗಿ ಸರ್ಜಿ ಆಸ್ಪತ್ರೆಗೆ ವಿದ್ಯಾಳನ್ನು ರವಾನಿಸಲಾಗಿದೆ.
ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post