ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಮನೆಯೊಂದರಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಪರಿಣಾಮ ಅಗ್ನಿ ಅವಘಡ ಸಂಭವಿಸಿ ತಾಯಿ ಹಾಗೂ ಮಗ ಮೃತಪಟ್ಟಿರುವ ಘಟನೆ ಕಾಯಿಪೇಟೆಯಲ್ಲಿ ನಡೆದಿದೆ.
ಮೃತರನ್ನು ಕಾಯಿಪೇಟೆ ನಿವಾಸಿ ವಿಮಲಾ(75) ಹಾಗೂ ಪುತ್ರ ಕುಮಾರ್(35) ಎಂದು ಗುರುತಿಸಲಾಗಿದೆ. ಕುಟುಂಬದ ಇನ್ನೂ ನಾಲ್ವರು ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜಕೀಯ ಮುಖಂಡರೊಬ್ಬರಿಗೆ ಸೇರಿದ ಮನೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್’ನಿಂದ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ಆರು ಜನರ ಪೈಕಿ ನಾಲ್ವರು ಹೊರಬಂದಿದ್ದಾರೆ. ದಟ್ಟ ಹೊಗೆ ಆವರಿಸಿಕೊಂಡಿದ್ದರಿಂದ ತಾಯಿ ಮತ್ತು ಮಗ ಮನೆಯಿಂದ ಹೊರಬರಲು ಸಾಧ್ಯವಾಗಿರಲಿಲ್ಲ ಎಂದು ಬಸವನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಕೊಠಡಿಯಲ್ಲಿ ಸಿಲುಕಿದ್ದ ತಾಯಿ ಮತ್ತು ಮಗನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಗಂಭೀರವಾಗಿ ಗಾಯಗೊಂಡಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post