ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಸಂಪ್ರದಾಯವನ್ನು ಕೈಬಿಟ್ಟು ರಾಷ್ಟ್ರಕವಿ ಕುವೆಂಪುರವರ ಮಂತ್ರ ಮಾಂಗಲ್ಯ ಧಾರಣೆಯಂತೆ ಜಾತಿ, ಕುಲ, ಮತಗಳೆನ್ನದೇ ಮಹಿಳಾ ನಿಲಯದ ಯುವತಿಯರ ವಿವಾಹವನ್ನು ನೆರವೇರಿಸಲಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಧಿವೃದ್ಧಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ದಾವಣಗೆರೆ ಇವರ ಸಹಯೋಗದಲ್ಲಿ ನಗರದಲ್ಲಿನ ಇಂಡಸ್ಟ್ರಿಯಲ್ ಏರಿಯಾ ಶ್ರೀರಾಮನಗದಲ್ಲಿರುವ ರಾಜ್ಯ ಮಹಿಳಾ ನಿಲಯದಲ್ಲಿ ಜರುಗಿದ ವಿವಾಹ ಮಹೋತ್ಸವದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್.ಕೆ ಆಗಮಿಸಿ ವಧುವರರಿಗೆ ಆಶೀರ್ವದಿಸಿದರು.

ಇಬ್ಬರೂ ಮಹಿಳೆಯರು ಸ್ವ-ಇಚ್ಛೆಯಿಂದ ಸಂಸ್ಥೆಯಿಂದಲೇ ವಿವಾಹವಾಗಿ ಬಿಡುಗಡೆಯಾಗಲು ಒಪ್ಪಿದ್ದರಿಂದ ಪೊಲೀಸ್ ವಿಚಾರಣೆ ಮೂಲಕ ವರರ ವ್ಯಕ್ತಿತ್ವ ಹಾಗೂ ಸ್ಥಳ ಪರಿಶೀಲನೆ ನಡೆಸಿದ ನಂತರ ವಿವಾಹದ ಮಾಹಿತಿಯನ್ನು ಇಲಾಖಾ ನಿರ್ದೇಶಕರಿಗೆ ರವಾನಿಸಿ ಅವರ ಅನುಮೋದನೆ ಹಾಗೂ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ವಿವಾಹವನ್ನು ಏರ್ಪಡಿಸಲಾಗಿದೆ ಎಂದರು.

Also read: ಗೃಹಲಕ್ಷ್ಮಿ ನೋಂದಣಿಗೆ ಹಣ ವಸೂಲಿ? ಸೈಬರ್ ಸೆಂಟರ್’ಗಳಿಗೆ ಮಂಡ್ಯ ಡಿಸಿ ದಿಢೀರ್ ಭೇಟಿ
ಅದೇ ರೀತಿಯಾಗಿ ಸಂಸ್ಥೆಯ ನಿವಾಸಿ ವಿನೋಧಳನ್ನು ಹರಿಹರ ತಾಲೂಕಿನ ದೇವರಬೆಳಕೆರೆ ಗ್ರಾಮದ ನಿವಾಸಿ ಮಲ್ಲಿಕಾರ್ಜುನ ಯು.ಎಂ. ವರಿಸಿದರು. ಇವರು ತಮ್ಮದೇ ಆದ ವ್ಯವಸಾಯ ಭೂಮಿಯನ್ನು ಹೊಂದಿದ್ದು, ಆರ್ಥಿಕವಾಗಿ ಸಧೃಡವಾಗಿರುತ್ತಾರೆ.











Discussion about this post