ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಜಿಲ್ಲಾ ಕೇಂದ್ರ ಹಾಗೂ ಹರಿಹರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್-ಕೇಸರಿ ವಿವಾದ ಹಿಂಸಾರೂಪಕ್ಕೆ ತಿರುಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ.
ದಾವಣಗೆರೆ ಹಾಗೂ ಹರಿಹರ ಎರಡೂ ಕಡೆಗಳಲ್ಲೂ ಏಕಕಾಲದಲ್ಲಿ ಎರಡೂ ಕೋಮಿನ ನಡುವೆ ಪ್ರತಿಭಟನೆ ನಡೆಸಲಾಗಿದ್ದು, ಈ ವೇಳೆ ಹರಿಹರದಲ್ಲಿ ಇದು ಹಿಂಸಾರೂಪಕ್ಕೆ ತಿರುಗಿದ್ದು, ವಿದ್ಯಾರ್ಥಿಗಳನ್ನು ಚದುರಿಸಲು ಅಶ್ರುವಾಯು ಪ್ರಯೋಗಿಸಿದ್ದಾರೆ.
ಇದೇ ವೇಳೆ, ದಾವಣಗೆರೆಯ ಕಾಲೇಜಿನಲ್ಲೂ ಇಂತಹುದ್ದೇ ಪರಿಸ್ಥಿತಿ ಉಂಟಾಗಿದ್ದು, ವಿದ್ಯಾರ್ಥಿಗಳಿಗೆ ತಿಳಿಹೇಳಿ, ಮನೆಗೆ ಕಳುಹಿಸಲು ಪೊಲೀಸರು ಪ್ರಯತ್ನಿಸಿದರು. ಆದರೆ, ಇದಕ್ಕೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರನ್ನು ಬೆಂಬಲಿಸಲು ಬಂದಿದ್ದ ಹೊರಗಿನ ವ್ಯಕ್ತಿಗಳನ್ನು ಚದುರಿಸುವ ಸಲುವಾಗಿ ಲಘು ಲಾಠಿ ಪ್ರಹಾರ ನಡೆಸಲಾಗಿದೆ.
ಹರಿಹರದಲ್ಲಿ ಘಟನೆಯ ವೇಳೆ ಹಲವು ದ್ವಿಚಕ್ರ ವಾಹನ ಹಾಗೂ ಕಾರುಗಳು ಜಖಂಗೊಂಡಿವೆ. ಸದ್ಯ ಪೊಲೀಸರು ಎರಡೂ ಕಡೆಗಳಲ್ಲಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post