ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಕೋರ್ಟ್ ಸೂಚಿಸಿದಂತೆ ಜೀವನಾಂಶ ನೀಡಬೇಕಿದ್ದ ಪತಿರಾಯ ತನ್ನ ಪತ್ನಿಯನ್ನೆ ಕೊಲೆ ಮಾಡಿದ್ದ ಪ್ರಕರಣದಲ್ಲಿ ಕೋರ್ಟ್ ಶಿಕ್ಷೆ ವಿಧಿಸಿದೆ.
ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನಲೆಯಲ್ಲಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಜಗಳೂರು ತಾಲೂಕಿನ ಅಸಗೋಡು ಗ್ರಾಮದ ಮಾರುತಿ ತನ್ನ ಪತ್ನಿ ಚೌಡಮ್ಮ ಅವರನ್ನು 2021 ರಲ್ಲಿ ಕೊಲೆ ಮಾಡಿದ್ದ. ಈ ಸಂಬಂಧ ಪೊಲೀಸರು ಕೋರ್ಟ್’ಗೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
Also read: ಪತ್ನಿಯರೇ ಗಮನಿಸಿ! ಇನ್ಮುಂದೆ ನಿಮ್ಮ ಪತಿಗೆ ಈ ಪದ ಪ್ರಯೋಗಿಸಿದರೆ ಕ್ರೌರ್ಯ ಆಗುತ್ತೆ!
ಇದೀಗ ಪ್ರಕರಣದ ವಿಚಾರಣೆ ಮುಗಿದಿದ್ದು ನ್ಯಾಯಾಧೀಶ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್ ನಿನ್ನೆ ದಿನ ಸೋಮವಾರ ತೀರ್ಪು ನೀಡಿದ್ದಾರೆ.
ತಮ್ಮ ತೀರ್ಪಿನಲ್ಲಿ ಆರೋಪಿಗೆ ಮೂರು ವರ್ಷ ಶಿಕ್ಷೆ ವಿಧಿಸಿದ್ದಾರೆ. ಇದಕ್ಕೂ ಮೊದಲು ವಿಚ್ಚೆದನ ಪ್ರಕರಣದಲ್ಲಿ ನ್ಯಾಯಾಲಯ ಆರೋಪಿತನ ಪತ್ನಿಗೆ ತಿಂಗಳಿಗೆ 4,000 ರೂಪಾಯಿ ಜೀವನಾಂಶ ನೀಡುವಂತೆ ಆದೇಶಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















