ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ತಾಯಿ-ಮಗುವಿನ ಮರಣ ಪ್ರಮಾಣವನ್ನು ತಗ್ಗಿಸಲು ತೀವ್ರ ನಿಗಾ ಘಟಕದಲ್ಲಿ ಅಗತ್ಯವಾಗಿರುವ ಎಲ್ಲ ಚಿಕಿತ್ಸಾ ಸೌಲಭ್ಯಗಳನ್ನು ಸಿದ್ದವಾಗಿರಿಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ DC M V Venkatesh ಸೂಚನೆ ನೀಡಿದರು.
ಚಿಗಟೇರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿ ಅವರು ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದರು.
ಹೆರಿಗೆ ವಾರ್ಡ್’ಗೆ ಭೇಟಿ ನೀಡಿ ಹೆರಿಗೆ ಪೂರ್ವ ಮತ್ತು ಹೆರಿಗೆ ನಂತರದಲ್ಲಿ ಸರಿಯಾದ ಚಿಕಿತ್ಸೆ ಲಭ್ಯವಾಗಬೇಕು. ಇದರಿಂದ ತಾಯಿ ಮಗುವಿನ ಮರಣ ಪ್ರಮಾಣವನ್ನು ಗಣನೀಯವಾಗಿ ತಗ್ಗಿಸಲು ಅಗತ್ಯವಿರುವವರಿಗೆ ತೀವ್ರ ನಿಗಾ ಘಟಕದಲ್ಲಿ ಸೂಕ್ತವಾದ ಚಿಕಿತ್ಸೆ ಲಭ್ಯವಾಗುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.
Also read: ಬಳ್ಳಾರಿ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಚಳ್ಳಕೆರೆಯ ಚಂದ್ರಶೇಖರ್ ಅಧಿಕಾರ ಸ್ವೀಕಾರ
ತುರ್ತು ನಿಗಾ ಘಟಕ ಹಾಗೂ ಹೊಸದಾಗಿ ಆರಂಭವಾಗಿರುವ ಡಯಾಲಿಸಿಸ್ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿ ರೋಗಿಗಳ ಯೋಗಕ್ಷೇಮ ವಿಚಾರಿಸಿದರು.
ಡಯಾಲಿಸಿಸ್ ಘಟಕದಲ್ಲಿ ರೋಗಿಗಳಿಗೆ ಬೇಕಾದ ಡಯಾಲಿಸಿಸ್ ಕಿಟ್’ಗಳ ದಾಸ್ತಾನು ಮತ್ತು ಔಷಧ, ಕೆಮಿಕಲ್ಸ್ ದಾಸ್ತಾನಿಟ್ಟುಕೊಂಡು ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಸೂಚನೆ ನೀಡಿದರು.
ಜಿಲ್ಲಾ ಸರ್ಜನ್ ಡಾ. ನಾಗೇಂದ್ರಪ್ಪ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post