No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Saturday, October 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಾವಣಗೆರೆ

ಹರಿಹರದ ಮುಸ್ಲಿಂ ಸಮುದಾಯದಿಂದ ಅನ್ನ ಸಂತರ್ಪಣೆ

ಗಣೇಶೋತ್ಸವ ಪರಿಸರ ಪೂರಕ ಹಬ್ಬವಾಗಲಿ: ಡಿಸಿ

kalpa News by kalpa News
August 25, 2022
in ದಾವಣಗೆರೆ
0
ಹರಿಹರದ ಮುಸ್ಲಿಂ ಸಮುದಾಯದಿಂದ ಅನ್ನ ಸಂತರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  |

ಗಣೇಶೋತ್ಸವವು ಸಾರ್ವಜನಿಕವಾಗಿ ಆಚರಿಸುವ ಹಬ್ಬವಾಗಿದೆ, ಶಾಂತಿ, ಸೌಹಾರ್ದತೆ ಕಾಪಾಡುವ ಜೊತೆಗೆ ಪರಿಸರ ಸ್ನೇಹಿ ಮಣ್ಣಿನ ಗಣೇಶ ಸ್ಥಾಪಿಸಿ ಹಬ್ಬವನ್ನು ಆಚರಿಸಬೇಕೆಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು.

ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೆÇಲೀಸ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಗೌರಿ ಗಣೇಶ ಚತುರ್ಥಿ ಪ್ರಯುಕ್ತ ಆಯೋಜಿಸಲಾಗಿದ್ದ ‘ನಾಗರಿಕ ಸೌಹಾರ್ದ ಸಮನ್ವಯ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣೇಶೋತ್ಸವ ಆಚರಿಸುವ ಸಂಘ-ಸಂಸ್ಥೆಗಳು ಸರ್ಕಾರದ ಸುತ್ತೋಲೆಯ ಅಂಶಗಳನ್ನು ಪಾಲಿಸುವ ಮೂಲಕ ಹಬ್ಬವನ್ನು ಆಚರಿಸಬೇಕು. ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು. ಹಿಂದಿನ ವರ್ಷಗಳಲ್ಲಿ ನಡೆದಂತೆ ಪ್ರಸಕ್ತ ವರ್ಷದಲ್ಲಿ ಕೂಡ ಶಾಂತಿಯುತವಾಗಿ ಮತ್ತು ಸೌಹಾರ್ದತೆಯಿಂದ ಹಬ್ಬ ಆಚರಿಸಲು ಮುಂದಾಗಬೇಕು ಎಂದರು.
ಮಹಾನಗರ ಪಾಲಿಕೆ ವತಿಯಿಂದ ಮೂರು ಕಡೆ ಏಕಗವಾಕ್ಷಿಯಡಿ ಗಣೇಶ ಪ್ರತಿಷ್ಟಾಪನೆಗೆ ಅನುಮತಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಆಯೋಜಕರು ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸಿ ಪರವಾನಿಗೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಮಾತನಾಡಿ, ಪರವಾನಿಗೆ ಪಡೆಯದೆ ಗಣೇಶ ಪ್ರತಿಷ್ಟಾಪಿಸಲು ಅವಕಾಶ ಇಲ್ಲ. ಆದ್ದರಿಂದ ಆಯೋಜಕರು ಕಡ್ಡಾಯವಾಗಿ ಪರವಾನಿಗೆ ಪಡೆಯಬೇಕು. ಫ್ಲೆಕ್ಸ್ ಬಳಕೆಗೆ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆಯದೆ ಅಳವಡಿಸಬಾರದು. ವಿಸರ್ಜನೆ ಸ್ಥಳದಲ್ಲಿ ಈಜು ಬಾರದವರು ನೀರಿಗೆ ಇಳಿಯಬಾರದು, ಈಜು ಬರುವವರಿಗೆ ಮಾತ್ರ ಇಳಿಯಲು ಅವಕಾಶ ನೀಡಬೇಕು. ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸುವ ಜವಾಬ್ದಾರಿ ಸಮಿತಿ ಮೇಲೆ ಇರುತ್ತದೆ ಎಂದರು.

ಬೃಹತ್ ಗಣಪತಿ ಪ್ರತಿಷ್ಟಾಪಿಸುವ ಸಂಘ-ಸಂಸ್ಥೆಗಳು ಮೆರವಣಿಗೆ ಮಾರ್ಗದಲ್ಲಿ ವಿದ್ಯುತ್ ಲೈನ್, ಮರಗಳ ಕುರಿತು ಪೂರ್ವ ವೀಕ್ಷಣೆ ನಡೆಸಬೇಕು. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾದಾಗ ಸಮಸ್ಯೆಗಳು ಉದ್ಭವಿಸುವ ಸಂಭವವಿರುತ್ತದೆ, ಆದ್ದರಿಂದ ಪರ್ಯಾಯವಾಗಿ ಜನರೇಟರ್ ಅನ್ನು ಬಳಕೆ ಮಾಡಬೇಕು. ಜವಾಬ್ದಾರಿತಯುತ ಸ್ವಯಂ ಸೇವಕರನ್ನು ನೇಮಿಸಿ ಅವರಿಗೆ ಗುರುತಿನ ಚೀಟಿ ನೀಡಬೇಕು ಹಾಗೂ ಅವರ ಪಟ್ಟಿಯನ್ನು ಪೊಲೀಸ್ ಇಲಾಖೆಗೆ ಸಲ್ಲಿಸಬೇಕು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ನಿಗದಿ ಪಡಿಸಿದ ಡೆಸಿಬಲ್ ಹೊಂದಿರುವ ಧ್ವನಿವರ್ಧಕಗಳನ್ನು ಬಳಸಲು ಅವಕಾಶವಿದೆ. ಈ ಕುರಿತು ಸಮಿತಿಯವರು ಸಹಕಾರ ನೀಡಬೇಕು ಎಂದು ಹೇಳಿದರು.
ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಸಂತೋμï ಮಾತನಾಡಿ, ಸಾಧ್ಯವಾದಷ್ಟು ಪರಿಸರ ಸ್ನೇಹಿ ಮಣ್ಣಿನ ಗಣಪತಿ ಪ್ರತಿಷ್ಟಾಪಿಸಬೇಕು. ಸುಪ್ರೀಂ ಕೋರ್ಟ್ ಆದೇಶದನ್ವಯ ಧ್ವನಿವರ್ಧಕಗಳನ್ನು ಬಳಸಲು ಅವಕಾಶವಿದೆ. ಪ್ಲಾಸ್ಟಿಕ್ ಹಾಗೂ ಥರ್ಮಾಕೋಲ್ ಬಳಸದೆ ಪರಿಸರ ಕಾಳಜಿ ಮೆರೆಯುವ ಮೂಲಕ ಗಣೇಶ ಹಬ್ಬವನ್ನು ಆಚರಣೆ ಮಾಡೋಣ ಎಂದರು.

ಮಹಾನಗರ ಪಾಲಿಕೆ ಅಧಿಕಾರಿ ಸಂತೋಷ್ ಮಾತನಾಡಿ, ಗಣೇಶ್ ಹಬ್ಬ ಆಚರಣೆ ಸಂದರ್ಭದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಜೊತೆಗೆ ಪರಿಸರ ಕಾಳಜಿಯೂ ಮುಖ್ಯ. ಗಣೇಶ ವಿಸರ್ಜನೆಗೆ ನಗರದ ಬಾತಿಕೆರೆ ಮತ್ತು ಹದಡಿ ರಸ್ತೆಗಳಲ್ಲಿ ತಾತ್ಕಾಲಿಕ ಗುಂಡಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಮನೆಗಳಲ್ಲಿ ಪ್ರತಿಷ್ಟಾಪಿಸುವ ಗಣಪತಿ ವಿಸರ್ಜನೆಗೆ ಮೊಬೈಲ್ ಟ್ಯಾಂಕ್ ಮೂಲಕ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಾಗಿ ಗಣಪತಿ ಪ್ರತಿಷ್ಟಾಪಿಸಿರುವ ಕಡೆಗಳಲ್ಲಿ ವಿಸರ್ಜನೆಗಾಗಿ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಹರಿಹರದ ನಂದಿಗಾವಿ ಶ್ರೀನಿವಾಸ್ ಮಾತನಾಡಿ, ಕೋವಿಡ್ ಕಾರಣಕ್ಕಾಗಿ ಕಳೆದು ಎರಡು ವರ್ಷದಿಂದ ಗಣೇಶೋತ್ಸವವನ್ನು ಆಚರಿಸಲು ಸಾಧ್ಯವಾಗಿಲ್ಲ. ಪ್ರಸಕ್ತ ವರ್ಷದಲ್ಲಿ ಶಾಂತಿಯುತವಾಗಿ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಹರಿಹರದಲ್ಲಿ ಗಣೇಶ ವಿಸರ್ಜನೆಯ ದಿನ ಮುಸ್ಲಿಂ ಸಮುದಾಯದಿಂದ ಅನ್ನ ಸಂತರ್ಪಣೆಯನ್ನು ಏರ್ಪಡಿಸಲಾಗಿದೆ ಎಂದರು.
ಮುಸ್ಲಿಂ ಸಮುದಾಯದ ಮುಖಂಡ ಅಮಾನುಲ್ಲಾ ಖಾನ್ ಮಾತನಾಡಿ, ಜಿಲ್ಲೆಯಲ್ಲಿ ಹಿಂದಿನಿಂದಲೂ ಶಾಂತಿಯುತವಾಗಿ ಗಣೇಶೋತ್ಸವ ಆಚರಣೆ ಮಾಡಲಾಗುತ್ತಿದೆ. ಮುಂದೆಯೂ ವಿಜೃಂಭಣೆಯಿಂದ ಶಾಂತಿಯುತವಾಗಿ ಆಚರಿಸಲು ನಮ್ಮೆಲ್ಲರ ಸಹಕಾರ ಇರಲಿದೆ ಎಂದರು.

Also read: ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಬಳಸಿ: ಜಿಪಂ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್

ನಗರದ ಹೈಸ್ಕೂಲ್ ಮೈದಾನದ ಹಿಂದೂ ಮಹಾ ಗಣಪತಿ ಸಮಿತಿಯ ಈಶ್ವರ್ ಶಿಂಧೆ ಮಾತನಾಡಿ, ಹೈಸ್ಕೂಲ್ ಮೈದಾನದಲ್ಲಿ ಕಳೆದ 5 ವರ್ಷಗಳಿಂದ ಗಣೇಶೋತ್ಸವವನ್ನು ಆಚರಿಸಕೊಂಡು ಬರಲಾಗುತ್ತಿದೆ. ಈ ವರ್ಷ ಸಿರಿಗೆರೆ ಮಠದ ತರಳಬಾಳು ಜಗದ್ಗುರು ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಗಳು ಪ್ರತಿμÁ್ಠಪನೆಯ ದಿನ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಪ್ರತಿನಿತ್ಯ 10 ರಿಂದ 15 ಸಾವಿರ ಭಕ್ತರು ದರ್ಶನಕ್ಕೆ ಆಗಮಿಸುವ ಸಂಭವವಿದೆ. ಆದ್ದರಿಂದ ಸೂಕ್ತ ಬಂದೋಬಸ್ತ್ ಒದಗಿಸಲು ತಾತ್ಕಾಲಿಕ ಪೊಲೀಸ್ ಠಾಣೆ ಸ್ಥಾಪಿಸಬೇಕು. ಬೆಸ್ಕಾಂ ವತಿಯಿಂದ ನಿರಂತರ ವಿದ್ಯುತ್ ಪೂರೈಕೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಪ್ರಸಾದ ಸಂದರ್ಭದಲ್ಲಿ ಕುಡಿಯುವ ನೀರು ಒದಗಿಸಲು ಸೂಚನೆ ನೀಡಬೇಕು. ವಿಸರ್ಜನೆಯ ದಿನದ ಶೋಭಾಯಾತ್ರೆಗೆ 8 ರಿಂದ 10 ಲಕ್ಷ ಜನ ಬರುವ ಸಾಧ್ಯತೆ ಇದೆ. ಯಾವುದೇ ಕಪ್ಪುಚುಕ್ಕೆ ಬಾರದಂತೆ ಮೆರವಣಿಗೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಪೆÇಲೀಸ್ ಬಂದೋಬಸ್ತ್ ಒದಗಿಸಬೇಕು ಎಂದು ಮನವಿ ಮಾಡಿದರು.

ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ್ ಮಾತನಾಡಿ, ಗಣೇಶೋತ್ಸವವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕಾಗಿದೆ. ನಗರದ ಹೊರವಲಯದ ಚಾನೆಲ್, ಕೆರೆಗಳಲ್ಲಿ ಗಣಪತಿಯನ್ನು ವಿಸರ್ಜಿಸುವುದನ್ನು ನಿಷೇಧಿಸಬೇಕು. ಏಕೆಂದರೆ ಈ ರೀತಿಯ ಪ್ಲಾಸ್ಟಿಕ್ ರಾಸಾಯನಿಕ ಮಿಶ್ರಿತ ನೀರು ಬಳಸುವುದರಿಂದ ಅನೇಕ ಮಕ್ಕಳಲ್ಲಿ ಚರ್ಮ ಸಮಸ್ಯೆಗಳು ಉಂಟಾಗುತ್ತಿವೆ ಎಂದರು.
ದೀಪಾಲಂಕಾರ ಮತ್ತು ಧ್ವನಿವರ್ಧಕಗಳ ಮಾಲೀಕರ ಸಂಘದ ಲಕ್ಷ್ಮಣ್ ಮಾತನಾಡಿ, ಕೋವಿಡ್ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಧ್ವನಿ ವರ್ಧಕಗಳ ಮಾಲೀಕರು ದುಡಿಮೆ ಇಲ್ಲದೆ ಸಂಕಷ್ಟದಲ್ಲಿದ್ದಾರೆ. ಈ ಒಂದು ಉದ್ಯಮದಲ್ಲಿ ತೊಡಗಿಸಿಕೊಂಡವರು ಅನೇಕರು ಬಡತನದ ಹಿನ್ನೆಲೆಯವರಾಗಿದ್ದಾರೆ, ಆದ್ದರಿಂದ ಸಮಯ ಪಾಲನೆ ಹಾಗೂ ನಿಗದಿತ ಡೆಸಿಬಲ್ ಅನುಸರಿಸಿ ಧ್ವನಿವರ್ಧಕ ಬಳಕೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಕೆ.ಹೆಚ್ ಮಂಜುನಾಥ, ಮಲ್ಲೇಶ್ ವಾಹಿ, ಚಂದ್ರಕುಮಾರ್, ಸರ್ದಾರ್ ಸಾಬ್, ಅಯೂಬ್ ಪೈಲ್ವಾನ್, ಗುರುನಾಥ ಬಾಬು, ಸಿರಾಜ್, ರಾಜನಹಳ್ಳಿ ಶಿವಕುಮಾರ್, ಸತೀಶ್ ಪೂಜಾರಿ, ಮಹಮ್ಮದ್ ಫೈರೋಜ್, ಶಂಕರ್ ನಾರಾಯಣ್, ಶಾಂತಕುಮಾರ್ ಹಾಗೂ ಪೇಟೆ ಪ್ರಶಾಂತ್ ಮಾತನಾಡಿದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ. ಚನ್ನಪ್ಪ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೊಂಡ ಬಸರಗಿ, ಉಪವಿಭಾಗಾಧಿಕಾರಿಗಳಾದ ದುರ್ಗಾಶ್ರೀ ಹಾಗೂ ಹುಲ್ಲುಮನಿ ತಿಮ್ಮಣ್ಣ, ಡಿವೈಎಸ್ಪಿ ನರಸಿಂಹ ತಾಮ್ರಧ್ವಜ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DavanagereKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaದಾವಣಗೆರೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಬಳಸಿ: ಜಿಪಂ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್

Next Post

ಆನವಟ್ಟಿ: ನಾಡಕಚೇರಿ ಎದುರು ರೈತರಿಂದ ಪ್ರತಿಭಟನೆ

kalpa News

kalpa News

Next Post
ಆನವಟ್ಟಿ: ನಾಡಕಚೇರಿ ಎದುರು ರೈತರಿಂದ ಪ್ರತಿಭಟನೆ

ಆನವಟ್ಟಿ: ನಾಡಕಚೇರಿ ಎದುರು ರೈತರಿಂದ ಪ್ರತಿಭಟನೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL