ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಸಹಶಿಕ್ಷಕರು ಹಾಗೂ ಅಡುಗೆ ಕೆಲಸದವರೊಂದಿಗೆ ಜಗಳವಾಡಿ ನೊಂದು ವಿಷ ಸೇವಿಸಿದ್ದ ಮುಖ್ಯ ಶಿಕ್ಷಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರು ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರು, ಅಡುಗೆ ಕೆಲಸದವರು ಮತ್ತು ಹೆಡ್ ಮಾಸ್ಟರ್ ಮಧ್ಯ ಒಳಜಗಳದ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಮಂಗಳವಾರ ಶಾಲೆಯ ಶೌಚಾಲಯಕ್ಕೆ ತೆರಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮುಖ್ಯ ಶಿಕ್ಷಕರಾದ ಜಯಪ್ಪ(55) ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Also read: ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ
ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥರಾಗಿದ್ದ ಜಯಪ್ಪ ಅವರನ್ನು ಸ್ಥಳೀಯರು, ಶಿಕ್ಷಕರು ತಕ್ಷಣವೇ ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ಕರೆತಂದು ದಾಖಲು ಮಾಡಿದ್ದರು. ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಪ್ಪ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















