ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಜು.15 ರಿಂದ ಸೆ.30 ರವರೆಗೆ 75 ದಿನಗಳ ಕಾಲ 18 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ Booster Dose Vaccination ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಶಿವಾನಂದ್ ಕಪಾಶಿ DC Shivananda Kapashi ಚಾಲನೆ ನೀಡಿದರು.
ನಗರದ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಾವಣಗೆರೆ ಇವರ ವತಿಯಿಂದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಚನ್ನಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಷಣ್ಮುಕಪ್ಪ, ಆರ್‍ಸಿಹೆಚ್ ಡಾ. ಮೀನಾಕ್ಷಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರೇಣುಕಾರಾಧ್ಯ, ಜಿಲ್ಲಾ ವಿಬಿಡಿಸಿ ಅಧಿಕಾರಿ ಡಾ. ನಟರಾಜ್, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಗಂಗಾಧರ್, ಜಿಲ್ಲಾ ಕುಷ್ಟರೋಗ ನಿಯಂತ್ರಣಾಧಿಕಾರಿ ಡಾ. ಮುರಳೀಧರ್, ಆರ್‍ಎಂಒ ಡಾ. ಮಂಜುನಾಥ ಪಾಟೀಲ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ. ಸುರೇಶ್ ಬಾರ್ಕಿ ಸೇರಿದಂತೆ ಇಲಾಖಾ ವೈದ್ಯರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.










Discussion about this post