ಕಲ್ಪ ಮೀಡಿಯಾ ಹೌಸ್
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಕೋವಿಡ್-19 ನಿಯಂತ್ರಣ ಸಾಧಿಸಲು ಕೈಗೊಂಡ ಕ್ರಮಗಳು ಮತ್ತು ತಾಲ್ಲೂಕಿನಲ್ಲಿ ವಿವಿಧ ಇಲಾಖೆಗಳಲ್ಲಿ ಆಗಿರುವ ಪ್ರಗತಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಬೆಳಿಗ್ಗೆ ನಡೆಸಲಾಯಿತು..
ದಾವಣಗೆರೆ ಸಂಸದ ಜಿ.ಎಮ್. ಸಿದ್ದೇಶ್ವರ, ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ಜಿಲ್ಲಾ ಪೋಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ್, ತಾಲ್ಲೂಕು ಪಂಚಾಯತ ಅಧ್ಯಕ್ಷರು, ಸದಸ್ಯರು ಸೇರಿದಂತೆ ತಾಲೂಕಿನ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಚನ್ನಗಿರಿ ತಾಲೂಕಿನಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಮನೆಗಳಿಗೆ ತೆರಳಿ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಈಗಾಗಲೇ ಕೋವಿಡ್ ನಿಂದ ಮೃತಪಟ್ಟ ಬಿ ಪಿ ಎಲ್ ಕುಟುಂಬದವರಿಗೆ ಒಂದು ಲಕ್ಷ ರೂಪಾಯಿ ನೀಡುವ ಆದೇಶ ಮಾಡಿದ್ದಾರೆ, ಅದನ್ನು ಕೊಡಿಸುವುದಾಗಿ ಬಸವರಾಜ, ಸಿದ್ದೇಶ್ವರ, ಮಾಡಾಳ್ ವಿರೂಪಾಕ್ಷಪ್ಪ ಭರವಸೆ ನೀಡಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ, ಪೊಲೀಸ್ ವರಿಷ್ಟಾಧಿಕಾರಿ ಸಿ.ಬಿ.ರಿಷ್ಯಂತ ಸೇರಿದಂತೆ ತಾಲೂಕಿನ ಪತ್ರಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news















