ಕಲ್ಪ ಮೀಡಿಯಾ ಹೌಸ್
ದಾವಣಗೆರೆ: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು ಜಿಲ್ಲೆಯ ಜಗಳೂರು ತಾಲ್ಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳು ಮತ್ತು ಸೋಂಕು ತಗುಲಿದ ರೋಗಿಗಳಿಗೆ ಚಿಕಿತ್ಸೆ ಸರಿಯಾದ ರೀತಿಯಲ್ಲಿ ನೀಡಲಾಗುತ್ತದಿದೆಯೆ ಎಂದು ಖುದ್ದಾಗಿ ನಿಂತು ಪರಿಶೀಲಿಸಿದರು.

ತಾಲ್ಲೂಕು ಅಡಳಿತ ಸೊಂಕು ನಿಯಂತ್ರಣಕ್ಕೆ ಯಾವ ರೀತಿಯಲ್ಲಿ ಕಾರ್ಯ ಪಡೆ ರಚಿಸಿ ಕಾರ್ಯನಿರ್ವಹಿಸುತ್ತಿದೆ ಎಂಬ ಮಾಹಿತಿಯನ್ನು ಪಡೆದರು. ಸಂಸದರಾದ ಜಿ.ಎಮ್. ಸಿದ್ದೇಶ್ವರ, ಜಿಲ್ಲಾಧಿಕಾರಿ ಮಹಾಂತೇಶ್ ಬಿಳಗಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















