ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೊನ್ನಾಳಿ: ಹೊನ್ನಾಳಿ ಹಾಗೂ ನ್ಯಾಮತಿ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿಯಾಗಿ ಎಚ್.ಎಂ. ಸಚಿನ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಹೊನ್ನಾಳಿ ಬಿಜೆಪಿ ಅಧ್ಯಕ್ಷ ಸುರೇಶ್ ಅವರು ಆದೇಶ ಹೊರಡಿಸಿದ್ದು, ಈ ಎರಡೂ ಕ್ಷೇತ್ರಗಳಲ್ಲಿ ಪಕ್ಷವನ್ನು ಸಂಘಟಿಸುವ ಕಾರ್ಯದಲ್ಲಿ ತೊಡಗಿಸುವಂತೆ ಸೂಚಿಸಲಾಗಿದೆ.
ಅಪಾರವಾದ ಸ್ನೇಹ ಬಳಗವನ್ನು ಹೊಂದಿರುವ ಸಚಿನ್ ಅವರು, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಗಳಿಸಿದವರು. ಈ ಮೂಲಕ ದೇಶ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಸಚಿನ್ ಅವರನ್ನು ಈ ಜವಾಬ್ದಾರಿ ಅರಸಿಬಂದಿದೆ.
ಶಿವಮೊಗ್ಗ ಸ್ನೇಹ ಬಳಗದ ಮಿತ್ರರು ಸಚಿನ್ ಅವರನ್ನು ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post