ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಪ್ರಸಕ್ತ ಸಾಲಿನಲ್ಲಿ ತಾತ್ಕಾಲಿಕ ಪಟಾಕಿ ಮಾರಾಟ ಪರವಾನಗಿ ಕೋರಿ ವರ್ತಕರು ಅರ್ಜಿ ಸಲ್ಲಿಸಿದ್ದು, ಇವರುಗಳಿಗೆ ಜಿಎಸ್’ಟಿ ಕಡ್ಡಾಯವಾಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ತಿಳಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, ಜಿಎಸ್’ಟಿ ಕಾಯ್ದೆಯಡಿ ಪಟಾಕಿ ಸರಕು ತೆರಿಗೆದಾಯಕ ಸರಕಾಗಿದ್ದಾರೆ. ವರ್ತಕರು ತಮ್ಮ ಮುಖ್ಯ ವ್ಯಾಪಾರ ಸ್ಥಳವನ್ನು ಹೊರತುಪಡಿಸಿ ಬೇರೆ ಕಡೆ ವ್ಯಾಪಾರ ನಡೆಸಲು ಸಂಬAಧಿಸಿದ ವ್ಯಾಪ್ತಿಯ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಕಛೇರಿ ಮತ್ತು ಎಲ್ಜಿಎಸ್ಟಿಓ ಕಚೇರಿಗಳಲ್ಲಿ ಹೆಚ್ಚುವರಿಯಾಗಿ ತಾತ್ಕಾಲಿಕ ನೋಂದಣಿ ಪಡೆಯುವುದು, ಅನೋಂದಾಯಿತ ವರ್ತಕರು ತಾತ್ಕಾಲಿಕ ನೊಂದಣೆ ಪಡೆಯುವುದು ಜಿಎಸ್ಟಿ ಕಾಯ್ದೆಯಡಿ ಕಡ್ಡಾಯವಾಗಿರುತ್ತದೆ. ಪ್ರಸಕ್ತ ವರ್ಷ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ದೀಪಾವಳಿ ಹಬ್ಬ ಇರುವುದರಿಂದ ವ್ಯಾಪಾರ ವಹಿವಟು ಪ್ರಾರಂಭವಾದಲ್ಲಿ ವರ್ತಕರಿಗೆ ನೋಂದಣಿ ನೀಡುವ ಪ್ರಕ್ರಿಯೆ ಜಾರಿಗೊಳಿಸಲು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ವರ್ತಕರು ಪಟಾಕಿ ವ್ಯಾಪಾರ ಮಾಡಲು ಪರವಾನಿಗೆಗಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಜಿಎಸ್ಟಿ ಕಾಯ್ದೆಯಡಿ ಕಡ್ಡಾಯವಾಗಿ ನೋಂದಣಿ ಪ್ರಮಾಣ ಪತ್ರ ಸಲ್ಲಿಸಬೇಕೆಂಬ ಷರತ್ತು ವಿಧಿಸಲು ಕೋರಲಾಗಿದೆ ಎಂದು ತಿಳಿಸಿದ್ದಾರೆ.

Also read: ಬಿಸಿಸಿಐ 36ನೆಯ ಅಧ್ಯಕ್ಷರಾಗಿ ಬೆಂಗಳೂರಿನ ರೋಜರ್ ಬಿನ್ನಿ ಆಯ್ಕೆ
ಹೆಚ್ಚಿನ ಮಾಹಿತಿಗಾಗಿ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತರು (ಜಾರಿ) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.











Discussion about this post