ದಾವಣಗೆರೆ: ಜಿಲ್ಲೆಯ ಹಲವೆಡೆ ಮಳೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯ ಖುದ್ಧು ಅವಲೋಕನ ನಡೆಸಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪ್ರವಾಹ ಪರಿಸ್ಥಿತಿಯ ಅವಲೋಕನದ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರವಾಹದ ಪ್ರಮಾಣ ಮತ್ತು ಎಲ್ಲೆಲ್ಲಿ ಅತೀ ಹೆಚ್ಚು ಪ್ರವಾಹಕ್ಕೆ ಹಾನಿಗಳಾಗಿವೆ ಎಂದು ಸವಿವರವನ್ನು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಪ್ರವಾಹಕ್ಕೆ ಸಂಬಂಧಿಸಿದಂತೆ ತುರ್ತು ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು. ನೆರೆಯಲ್ಲಿ ಸಿಕ್ಕಿ ಹಾಕಿಕೊಂಡಿರುವ ಕುಟುಂಬಗಳಿಗೆ ಕೂಡಲೇ ಪರಿಹಾರ ಕಾರ್ಯ ಕೈಗೊಳ್ಳಲು ಅಗತ್ಯಕ್ರಮ ವಹಿಸಲು ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
















