ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ತಿಳಿಸಿದರು.
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಕೇಂದ್ರ ಸರ್ಕಾರ ಜನಗಣತಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ನಮ್ಮ ಸಮೀಕ್ಷೆಗೂ ಅವರ ಸಾಮೀಕ್ಷೆಗೂ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆಯ ವ್ಯತ್ಯಾಸವಿದೆ ಎಂದರು.

ವರದಿಯ ಕುರಿತು ಪ್ರಬಲರು ಹಾಗೂ ದುರ್ಬಲರು ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ವರ್ಗಗಳ ಕಾಯ್ದೆಯ ಸೆಕ್ಷನ್ 11 (1 )ರ ಪ್ರಕಾರ ವರದಿಗೆ ಹತ್ತು ವರ್ಷಗಳಾದ ಮೇಲೆ ಮರು ಸಮೀಕ್ಷೆಯಾಗಬೇಕು ಎಂದು ತಿಳಿಸಲಾಗಿದೆ. ಅದಕ್ಕಾಗಿ ಮರು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post