ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಮಾರನಹಳ್ಳಿ ಬಳಿ ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ.
ಶಿವರಾಜ್ (35) ಹಾಗೂ ಪ್ರಮೋದ್ (33) ಮೃತ ದುರ್ದೈವಿಳಾಗಿದ್ದು, ಹೊನ್ನಾಳಿಯಿಂದ ದಾವಣಗೆರೆಗೆ ಬೈಕ್ನಲ್ಲಿ ಶಿವರಾಜ್ ಹಾಗೂ ಪ್ರಮೋದ್ ಬರುತ್ತಿದ್ದ ವೇಳೆ ಹಾವೇರಿಯಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತ ಶಿವರಾಜ್ ದಾವಣಗೆರೆ ಜಿಲ್ಲೆಯ ನ್ಯಾಮತಿ ಪಟ್ಟಣ ನಿವಾಸಿ ಮತ್ತು ಮೃತ ಪ್ರಮೋದ್ ದಾವಣಗೆರೆ ನಗರದ ಬಂಬೂ ಬಜಾರ್ ನಿವಾಸಿಗಳೆಂದು ಗುರುತಿಸಲಾಗಿದೆ. ಮಲೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post