ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೆಯ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ 38 ನೆಯ ಪತ್ರಕರ್ತರ ಸಮ್ಮೇಳನದ ಪೂರ್ವ ಸಿದ್ಧತಾ ಸಭೆಯನ್ನು ಉದ್ಘಾಟಿಸಿ, ಸಮ್ಮೇಳನದ ವೆಬ್ ಸೈಟ್ ಆರಂಭಿಸಿ ಮಾತನಾಡಿದರು.

ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನ ಪತ್ರಿಕೋದ್ಯಮದ ಸಾಧ್ಯತೆಗಳನ್ನು ವಿಸ್ತರಿಸುತ್ತಿರುವ ರೀತಿಯಲ್ಲೇ ಹಲವು ಸವಾಲುಗಳನ್ನು ಸೃಷ್ಟಿಸುತ್ತಿದೆ. ಈ ಎಲ್ಲಾ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಬೇಕಾದ ಸಿದ್ದತೆ ಮತ್ತು ತರಬೇತಿ ಪತ್ರಕರ್ತ ಸಮೂಹಕ್ಕೆ ದೊರಕಬೇಕಿದೆ. ಈ ಎಲ್ಲಾ ಸಂಗತಿಗಳು ಸಮ್ಮೇಳನದಲ್ಲಿ ಚರ್ಚೆ ಆಗಲಿ ಎಂದು ಆಶಿಸಿದರು.











Discussion about this post