ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಾದ್ಯಂತ ಕೊರೋನಾ ಹಾಗೂ ಓಮಿಕ್ರಾನ್ ವೈರಸ್ ತೀವ್ರವಾಗಿ ಏರಿಕೆಯಾಗುತ್ತಿದ್ದು, ಇದರ ತಡೆಗೆ ಕರ್ನಾಟಕವನ್ನು ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿದೆ ಎಂದು ವರದಿಯಾಗಿದೆ.
ಈ ಕುರಿತಂತೆ, ತಾಂತ್ರಿಕ ಸಲಹಾ ಸಮಿತಿ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಮುಂದಿನ ಅಪಾಯಗಳನ್ನು ರಾಜ್ಯ ಸರ್ಕಾರಕ್ಕೆ ವಿವರಿಸಿದೆ. ರಾಜ್ಯದಲ್ಲಿ ನಿನ್ನೆಯವರೆಗೂ ಕೊರೋನಾ ಪಾಸಿಟಿವಿಟಿ ಪ್ರಮಾಣ 0.86 ರಷ್ಟಿದೆ. ಈಗ 3ನೆಯ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆಯ ಸಂದೇಶ ರವಾನಿಸಿರುವ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಪಾಸಿಟಿವಿಟಿ ದರ ಶೇ. 5ಕ್ಕೆ ಏರಿಕೆಯಾದರೆ, ಲಾಕ್’ಡೌನ್ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ.
ರಾಜ್ಯದಲ್ಲಿ ಸೋಂಕು ತಡೆಯಲು ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸಬೇಕು, ಮಾಸ್ಕ್, ಸಾಮಾಜಿಕ ಅಂತರ, ಜನದಟ್ಟಣೆ ಪ್ರದೇಶಗಳಲ್ಲಿ ಪರೀಕ್ಷೆ ಚುರುಕುಗೊಳಿಸುವಂತೆಯೂ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ.
ನೈಟ್ ಕರ್ಫ್ಯೂ ಮುಂದುವರಿಕೆ?
ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಾದ್ಯಂತ ಈಗಾಗಲೇ ಜಾರಿಯಲ್ಲಿರುವ ನೈಟ್ ಕರ್ಫ್ಯೂವನ್ನು ಮುಂದುವರೆಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಆರೋಗ್ಯ ಇಲಾಖೆ ಆಯುಕ್ತ ರಣದೀಪ್, ರಾಜ್ಯದಲ್ಲಿ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಮುಂದುವರೆಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post