ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರೀಯ ಹೆದ್ದಾರಿ 169ಎ ವ್ಯಾಪ್ತಿಯ ಪ್ರಸಿದ್ಧ ಆಗುಂಬೆ ಘಾಟಿ ರಸ್ತೆಯಲ್ಲಿ ಮಳೆಗಾಲದ ಅವಧಿಯಲ್ಲಿ ಸಂಭವಿಸಬಹುದಾದ ಪ್ರಕೃತಿ ವಿಕೋಪ ಮತ್ತು ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.
ಜೂನ್ 15ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೂ ಜಲ್ಲಿ ಮತ್ತು ಭಾರಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
Also Read>> ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ
ಹುಲಿಕಲ್ ಘಾಟಿಯಲ್ಲಿ ಭೂಕುಸಿತ ಹಿನ್ನೆಲೆ
ಶಿವಮೊಗ್ಗ–ಉಡುಪಿ ಸಂಪರ್ಕಿಸುವ ಮತ್ತೊಂದು ಪ್ರಮುಖ ಮಾರ್ಗವಾದ ಹುಲಿಕಲ್ ಘಾಟಿಯಲ್ಲಿ ಇತ್ತೀಚೆಗೆ ಭೂಕುಸಿತ ಸಂಭವಿಸಿದ್ದು, ರಕ್ಷಣಾತ್ಮಕ ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ.
ಇದರಿಂದ ವಾಹನಗಳ ಒತ್ತಡ ಆಗುಂಬೆ ಘಾಟಿಯ ಮೇಲೆ ಹೆಚ್ಚಿದ್ದು, ಮಳೆಗಾಲದಲ್ಲಿ ಅಪಾಯದ ಮಟ್ಟವೂ ಏರಿಕೆಯಾಗಿದೆ.
ಆರೋಗ್ಯ ಸೇವೆಗಳ ಸಂಪರ್ಕ ಕಾಪಾಡಲು ಕ್ರಮ
ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಮತ್ತು ಹಾವೇರಿ ಜಿಲ್ಲೆಗಳ ಸಾವಿರಾರು ಜನರು ತುರ್ತು ಚಿಕಿತ್ಸೆಗಾಗಿ ಮಣಿಪಾಲ್, ಉಡುಪಿ ಮತ್ತು ಮಂಗಳೂರು ಆಸ್ಪತ್ರೆಗಳಿಗೆ ಇದೇ ಮಾರ್ಗವನ್ನು ಅವಲಂಬಿಸಿದ್ದಾರೆ.
ಈ ಸಂಪರ್ಕ ಕಡಿತವಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ಜಾರಿಗೊಳಿಸಲಾಗಿದೆ.
Also Read>> ಕೆಸಿಇಟಿ ಫಲಿತಾಂಶ | ಕಾರ್ಕಳ ಕ್ರೆಸ್ಟ್‌ಕಿಂಗ್ ಕಾಲೇಜು ವಿದ್ಯಾರ್ಥಿಗಳ ಮಿಂಚಿನ ಸಾಧನೆ
ಪರ್ಯಾಯ ಮಾರ್ಗಗಳ ವಿವರ
ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ:
- ತೀರ್ಥಹಳ್ಳಿ – ನಗರ – ನಾಗೋಡಿ – ಕೊಲ್ಲೂರು – ಕುಂದಾಪುರ – ಉಡುಪಿ
- ತೀರ್ಥಹಳ್ಳಿ – ಶೃಂಗೇರಿ – ಕೆರೆಕಟ್ಟೆ – ಬಜಗೋಳಿ – ಕಾರ್ಕಳ – ಉಡುಪಿ
ಉಡುಪಿಯಿಂದ ತೀರ್ಥಹಳ್ಳಿ ಕಡೆಗೆ:
- ಉಡುಪಿ – ಕುಂದಾಪುರ – ಕೊಲ್ಲೂರು – ನಾಗೋಡಿ – ನಗರ – ತೀರ್ಥಹಳ್ಳಿ
- ಕಾರ್ಕಳ – ಬಜಗೋಳಿ – ಕೆರೆಕಟ್ಟೆ – ಶೃಂಗೇರಿ – ತೀರ್ಥಹಳ್ಳಿ
ಮುನ್ನೆಚ್ಚರಿಕೆ ಕ್ರಮ
ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಹುಲಿಕಲ್ ಘಾಟಿಯಲ್ಲಿ ಭೂಕುಸಿತ ಸಂಭವಿಸಿದ ನಂತರ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿ ಪೂರ್ಣಗೊಳ್ಳದಿರುವುದರಿಂದ ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಹೆಚ್ಚಿನ ಓಡಾಟವಿರುತ್ತದೆ. ಮುಂದಿನ ದಿನಗಳಲ್ಲಿಯೂ ಇದು ಮುಂದುವರಿದಲ್ಲಿ ಅಲ್ಲಲ್ಲಿ ರಸ್ತೆಯ ಬದಿಯ ಭೂಕುಸಿತ ಆಗುವ, ಅಫಘಾತವಾಗುವ ಮತ್ತು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುವ ಸಂಭವ ಇರುತ್ತದೆ.
ಮಳೆಗಾಲದಲ್ಲಿ ಭೂಕುಸಿತ, ಅಪಘಾತ ಹಾಗೂ ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆಯನ್ನು ಮನಗಂಡು ಈ ಕ್ರಮ ಕೈಗೊಳ್ಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ | ಪ್ರಧಾನಿ ಮೋದಿ ಭಾವುಕ ಮಾತು



















