ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಲ್ಲಿನ ಕತ್ರಿಗುಪ್ಪೆಯಲ್ಲಿ ವೇಗವಾಗಿ ಸಂಚರಿಸುತ್ತಿದ್ದ ಕಾರೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
Also Read: ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದೇನು?ಬನಶಂಕರಿ ಕಡೆಯಿಂದ ಇಟ್ಟಮಡುವು ಕಡೆಗೆ ಚಲಿಸುತ್ತಿದ್ದ ಕಾರು, ಹೊಟೇಲ್’ಗೆ ಕಾಫಿ ಕುಡಿಯಲು ನಡೆದುಕೊಂಡು ಹೋಗುತ್ತಿದ್ದ ಸಚಿನ್, ಶೈಲೇಂದ್ರ ಹಾಗೂ ಶಿವರಾಜ್ ನಾಲ್ವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ನಾಲ್ವರೂ ಹಾರಿ ಹೋಗಿ ದೂರಕ್ಕೆ ಬಿದ್ದಿದ್ದಾರೆ. ಇದರಲ್ಲಿ ಓರ್ವ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
Also Read: 250 ಮಿಮೀ ಮಳೆ, 4 ಸಾವಿರ ಮನೆ ಜಲಾವೃತ, ಪರಿಹಾರಕ್ಕೆ ಕ್ರಮ: ಸಂಸದ ರಾಘವೇಂದ್ರ
ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಕಿರುತೆರೆ ನಿರ್ದೇಶಕ ಎಂದು ಹೇಳಲಾಗಿದ್ದು, ಶೂಟಿಂಗ್ ಮುಗಿಸಿಕೊಂಡು ತೆರಳುತ್ತಿದ್ದರು ಎನ್ನಲಾಗಿದೆ. ಇವರ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸದ್ಯ ಇವರನ್ನು ಹಾಗೂ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದು ಎಂತಹವರನ್ನೂ ಬೆಚ್ಚಿ ಬೀಳಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post