ಕಲ್ಪ ಮೀಡಿಯಾ ಹೌಸ್ | ಆನಂದಪುರಂ |
ಸಾಗರ ತಾಲೂಕಿನ ಆನಂದಪುರಂ ಸಮೀಪದ ಕಣ್ಣೂರು ಬಳಿಯಲ್ಲಿ ಲಾರಿ ಹಾಗೂ ಮಿನಿ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೊಸನಗರದಿಂದ ಶಿಕಾರಿಪುರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಶುಂಠಿ ತುಂಬಿಕೊಂಡು ಕುಂದಾಪುರಕ್ಕೆ ತೆರಳುತ್ತಿದ್ದ ಮಿನಿ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ಮಿನಿ ವಾಹನದಲ್ಲಿ ಚಾಲಕನ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಅಪಘಾತದ ಸ್ಥಳದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆನಂದಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post