ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಾರಕ ಕೊರೋನಾ ವೈರಸ್ ಅಟ್ಟಹಾಸಕ್ಕೆ ಕಡೂರು ಮೂಲಕ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ.
ಸುಮಾರು 50 ವರ್ಷದ ಶಿಕ್ಷಕರೊಬ್ಬರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಂದರ್ಭ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆನಂತರ ಅವರ ವರದಿಯಲ್ಲಿ ಕೋವಿಡ್19 ದೃಢಪಟ್ಟ ಹಿನ್ನಲೆಯಲ್ಲಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆಗೆ ಅವರು ಸ್ಪಂದಿಸದೇ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಆದರೆ, ಈ ಕುರಿತಂತೆ ಅಧಿಕೃತ ಮಾಹಿತಿ ಇನ್ನೂ ಹೊರಬರಬೇಕಿದೆ.
Get In Touch With Us info@kalpa.news Whatsapp: 9481252093
Discussion about this post