No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಪ್ರಧಾನಿ ಮೋದಿ ಅವರಿಗೆ ಮನವಿ: ಸಿಎಂ ಸಿದ್ಧರಾಮಯ್ಯ

kalpa News by kalpa News
December 20, 2023
in ಬೆಂಗಳೂರು ನಗರ
0
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ದೆಹಲಿ |

ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ PMNarendraModi ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ತಿಳಿಸಿದರು.

ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿ ವಿವರ ನೀಡಿದರು.

ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ Amith Shah ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದರು.

ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದರು.
ಮನವಿಯಲ್ಲಿರುವ ಬೇಡಿಕೆಗಳು

  • ಬರ ಪರಿಹಾರ ಶೀಘ್ರ ಬಿಡುಗಡೆ
  • ನರೇಗಾ ಕೆಲಸವನ್ನು 150 ದಿನಗಳಗೆ ಹೆಚ್ಚಿಸಬೇಕು.
  • ಭದ್ರಾ ಮೇಲ್ದಂಡೆಗೆ ಕೊಟ್ಟ ಮಾತಿನಂತೆ ಹಣ ಬಿಡುಗಡೆ ಮಾಡಬೇಕು.
  • ಮಹದಾಯಿ ಯೋಜನೆಗೆ ಪರಿಸರ ಕ್ಲಿಯರೆನ್ಸ್ ಶೀಘ್ರವಾಗಿ ನೀಡಬೇಕು.
  • ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಅನುಮತಿಸಬೇಕು

ಬರ ಪರಿಹಾರ ಸಂಬಂಧ ಇವತ್ತಿನವರೆಗೂ ಹೈಲೆವೆಲ್ ಕಮಿಟಿ ಮೀಟಿಂಗ್ ಮಾಡಿಲ್ಲ. ಇದರಿಂದ ರಾಜ್ಯದ ರೈತರ ಸಂಕಷ್ಟಕ್ಕೆ ಕೇಂದ್ರದಿಙದ ಬರಬೇಕಾದ ಪರಿಹಾರ ಬರುತ್ತಿಲ್ಲ. ಪ್ರಧಾನಿ ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿದರು. ಅಮಿತ್ ಶಾ ಅವರಿಗೆ ಸೂಚನೆ ನೀಡಲು ಮನವಿ ಮಾಡಿದ್ದೇವೆ.

Also read: ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಈ ಮನವಿಯನ್ನು ಮಾಡಿದ್ದೇವೆ. ಈ ಮನವಿ ಈಡೇರಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ.
ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ. ಬೇರೆ ಅಡೆ ತಡೆ ಏನೂ ಇಲ್ಲ. ಪರಿಸರ ಕ್ಲಿಯರೆನ್ಸ್ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರವೇ ಕೊಡಬೇಕು. ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು. ಆದ್ದರಿಂದ ಬೇಗ ಕ್ಲಿತರೆನ್ಸ್ ಕೊಡಿಸುವಂತೆ ಒತ್ತಾಯಿಸಿದ್ದೇವೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ 5300 ಕೋಟಿ ಘೋಷಿಸಿದ್ದರು‌. ಇವರ ಘೋಷಣೆ ಆಧಾರದಲ್ಲಿ ಹಿಂದಿನ‌ ಮುಖ್ಯಮಂತ್ರಿ ಬೊಮ್ಮಾಯಿ ಅವರೂ ಕೂಡ 5300 ಕೋಟಿ ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್ ಮೆಂಟ್. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೇವೆ.

ಮೇಕೆದಾಟು, ಕುಡಿಯುವ ನೀರಿನ ಯೋಜನೆ. ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವ ಯೋಜನೆ. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಇದರಿಂದ ತಮಿಳುನಾಡಿಗೇ ಹೆಚ್ಚು ಅನುಕೂಲ. ನಮಗೆ ಕುಡಿಯುವ ನೀರಿನ ಜತೆಗೆ 400 ಮೆಘಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತದೆ. ವಿದ್ಯುತ್ ಉತ್ಪಾದನೆ ಬಳಿಕ ಈ ನೀರು ಕೂಡ ತಮಿಳುನಾಡಿಗೇ ಹೋಗ್ತದೆ. ಇದರಿಂದಲೂ ಅವರಿಗೇ ಅನುಕೂಲ.
ಮೇಕೆದಾಟು ಆದರೆ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗತ್ತೆ. ಆದ್ದರಿಂದ ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿಗಳ ಗಮನಕ್ಕೆ ತಂದು ಒತ್ತಾಯಿಸಿದ್ದೇವೆ.

ಮಹದಾಯಿ, ಮೇಕೆದಾಟು, ಭದ್ರಾ ಮೇಲ್ಸಂಡೆ ಯೋಜನೆಗಳಿಗಾಗಿ ನಾವು ಸರ್ವ ಪಕ್ಷ ನಿಯೋಗದ ಜತೆ ಕೇಂದ್ರಕ್ಕೆ ಬರಲು ಸಿದ್ದರಿದ್ದೇವೆ. ಆದಷ್ಟು ಬೇಗ ನಿಗಮ ಮಂಡಳಿ ಅಂತಿಮ. ಮೊದಲ ಹಂತದಲ್ಲಿ MLA ಗಳದ್ದು. Next ಕಾರ್ಯಕರ್ತರದ್ದು.

ಪ್ರಜಾಪ್ರಭುತ್ವ ವಿರೋಧಿ ಕ್ರಮ

ಸಂಸತ್ತಿನ ಇತಿಹಾದಲ್ಲೇ ಮೊದಲ ಬಾರಿಗೆ 141 ಸಂಸದರನ್ನು ಒಂದೇ ಬಾರಿಗೆ ಅಮಾನತ್ತು ಮಾಡಿದ ಉದಾಹರಣೆ ಇಲ್ಲ. 141 ಮಂದಿ ಸಂಸದರನ್ನು ಅಮಾನತ್ತು ಮಾಡಿರುವುದು ಸರ್ವಾಧಿಕಾರವನ್ನೂ ಮೀರಿದ ಕ್ರಮ. ಇದನ್ನು ಪ್ರಜಾಪ್ರಭುತ್ವ ಅಂತ ಕರೆಯಲು ಸಾಧ್ಯವಿಲ್ಲ. ಚರ್ಚೆ ಪ್ರಜಾಪ್ರಭುತ್ವದ ಮೂಲ. ಒಳ್ಳೆ ಸರ್ಕಾರ strong ವಿರೋಧ ಪಕ್ಷ ಇದ್ದಾಗ ಮಾತ್ರ ಸಾಧ್ಯ.

ಸರ್ಕಾರದ ತಪ್ಪುಗಳನ್ನು ಹೇಳುವಂಥಾ ಆರೋಗ್ಯಪೂರ್ಣ ವಾತಾವರಣ ಇರಬೇಕು. ಅವರ ಪಕ್ಷದ MP ಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ನಡೆಸುವುದು ನಾಚಿಕೆಗೇಡು.

ಜಾತಿ ಗಣತಿ ವರದಿ ಇನ್ನೂ ಕೊಟ್ಟಿಲ್ಲ. ಕೆಲವರು ಊಹೆ ಮಾಡಿಕೊಂಡು ವಿರೋಧ ಮಾಡ್ತಿದ್ದಾರೆ. ಅವರು ವರದಿ ಯಾವಾಗ ಕೊಡ್ತಾರೆ ಎನ್ನುವುದು ಖಚಿತವಾಗಿ ಕೊಟ್ಟಿಲ್ಲ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
       

Tags: Amith ShahDehliKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಅಮಿತ್ ಶಾದೆಹಲಿ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

Next Post

ಭದ್ರಾವತಿ ಬಿಹೆಚ್ ರಸ್ತೆಯಲ್ಲಿ ಯುವಕನ ಭೀಕರ ಹತ್ಯೆ: ಹಳೇ ದ್ವೇಷದ ಶಂಕೆ?

kalpa News

kalpa News

Next Post
Faridabad Teacher Murder Stabbed School Revenge Attack

ಭದ್ರಾವತಿ ಬಿಹೆಚ್ ರಸ್ತೆಯಲ್ಲಿ ಯುವಕನ ಭೀಕರ ಹತ್ಯೆ: ಹಳೇ ದ್ವೇಷದ ಶಂಕೆ?

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL