ಕಲ್ಪ ಮೀಡಿಯಾ ಹೌಸ್ | ಡೆಹ್ರಾಡೂನ್ |
ಕೇದಾರನಾಥ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು ಪೈಲಟ್ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
#WATCH | Uttarakhand: A helicopter carrying Kedarnath pilgrims from Phata crashes, casualties feared; administration team left for the spot for relief and rescue work. Further details awaited pic.twitter.com/sDf4x1udlJ
— ANI (@ANI) October 18, 2022
ಕೇದಾರನಾಥ್ ದೇವಸ್ಥಾನದಿಂದ 2 ಕಿ.ಮೀ ದೂರದಲ್ಲಿ ಈ ದುರಂತ ನಡೆದಿದ್ದು, ಹೆಲಿಕಾಪ್ಟರ್ನಲ್ಲಿ 8 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಎನ್ಡಿಆರ್ಎಫ್, ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಲಿಕಾಪ್ಟರ್ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ.
Also read: ವಿದ್ಯುತ್ ಖಾಸಗಿಕರಣ ನಿರ್ಧಾರ ಕೈಬಿಡದಿದ್ದಲ್ಲಿ ಉಗ್ರ ಹೋರಾಟ: ರಾಜ್ಯ ರೈತ ಸಂಘ ಎಚ್ಚರಿಕೆ
ಘಟನೆ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಜಿಲ್ಲಾಡಳಿತ ತಂಡಗಳು ಸ್ಥಳಕ್ಕೆ ತಲುಪಿವೆ. ಈ ದುರಂತದ ಕುರಿತು ವಿವರವಾದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post