ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ಸ್ಫೋಟಕ್ಕೆ ಕಾರಣವಾದ ಹಿಂದಿರುವ ಯಾರನ್ನು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ #PMNarendraModi ಎಚ್ಚರಿಕೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಯಾವುದೇ ರೀತಿಯ ಭಯೋತ್ಪಾದಕ ಕೃತ್ಯಗಳನ್ನು ಭಾರತ ಸಹಿಸುವುದಿಲ್ಲ. ಈಗ, ದೆಹಲಿಯ ಕೆಂಪು ಕೋಟೆ #Redfort ಬಳಿಯಲ್ಲಿ ಸ್ಫೋಟಕ್ಕೆ ಕಾರಣವಾದ ಯಾರನ್ನೂ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಎಲ್ಲಕ್ಕೂ ಶೀಘ್ರದಲ್ಲೇ ಉತ್ತರ ಕೊಡುತ್ತೇವೆ ಎಂದಿದ್ದಾರೆ.
ಪುಲ್ವಾಮಾ ದಾಳಿಯ ನಂತರ ಪಾಕಿಸ್ಥಾನಕ್ಕೆ ಆಪರೇಶನ್ ಸಿಂಧೂರದ #OperationSindhoor ಮೂಲಕ ನೆನಪಿಟ್ಟುಕೊಳ್ಳುವಂತೆ ಪಾಠ ಕಲಿಸಲಾಗಿತ್ತು. ಅಂದು ನಮ್ಮ ಸೇನಾ ಪಡೆಗಳ ದಾಳಿಗೆ ಪಾಕಿಸ್ಥಾನ ಅಕ್ಷರಶಃ ನಲುಗಿ ಹೋಗಿತ್ತು. ಭಾರತದ ಹೊಡೆತ ತಡೆಯಲಾಗದೇ ಅಲ್ಲಿನ ಸೇನಾ ಮುಖ್ಯಸ್ಥ ಪ್ರಧಾನಿ ಮೋದಿಯವರಿಗೆ ಕರೆ ಮಾಡಿ, ನಮ್ಮಿಂದ ಇನ್ನು ಹೊಡೆತ ಸಹಿಸಲು ಸಾಧ್ಯವಿಲ್ಲ. ದಯಮಾಡಿ ದಾಳಿ ನಿಲ್ಲಿಸಿ ಎಂದು ಅಂಗಲಾಚಿದ್ದರು. ಆನಂತರ ಭಾರತ ಶಾಂತಿ ಕಾಪಾಡುವ ದೃಷ್ಠಿಯಿಂದ ದಾಳಿ ನಿಲ್ಲಿಸಿತ್ತು.

ಇದರ ಬೆನ್ನಲ್ಲೇ, ಪ್ರಧಾನಿ ಮೋದಿ ನೀಡಿರುವ ಎಚ್ಚರಿಕೆ ಸಂದೇಶ ಇನ್ನೊಂದು ಆಪರೇಶನ್ ಸಿಂಧೂರದ ಮಾರಿಹಬ್ಬ ಕಾದಿದೆ ಎಂಬ ಸುಳಿನ್ನುನೀಡಿದೆ.
ಒಬ್ಬೊಬ್ಬರನ್ನು ಬೇಟೆಯಾಡಿ : ಅಮಿತ್ ಶಾ ಖಡಕ್ ಆದೇಶ
ಕೆಂಪು ಕೋಟೆಯ #RedFort ಬಳಿಯಲ್ಲಿ ಭೀಕರ ಸ್ಪೋಟದ ಹಿಂದಿರುವ ಪ್ರತಿಯೊಬ್ಬರನ್ನೂ ಹುಡುಕಿ ಬೇಟೆಯಾಡಿ ಎಂದು ಗೃಹ ಸಚಿವ ಅಮಿತ್ ಶಾ #AmitShah ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಭೆಯ ನಂತರ X ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅಮಿತ್ ಶಾ, ದೆಹಲಿ ಕಾರು ಸ್ಫೋಟದ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಗಳನ್ನು ನಡೆಸಿದ್ದೇನೆ. ಈ ಘಟನೆಯ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಬೇಟೆಯಾಡಲು ಅವರಿಗೆ ಸೂಚನೆ ನೀಡಿದ್ದೇನೆ. ಈ ಕೃತ್ಯದಲ್ಲಿ ಭಾಗಿಯಾಗಿರುವ ಪ್ರತಿಯೊಬ್ಬರೂ ನಮ್ಮ ಏಜೆನ್ಸಿಗಳ ಸಂಪೂರ್ಣ ಕೋಪವನ್ನು ಎದುರಿಸಬೇಕಾಗುತ್ತದೆ. ಇಂತಹ ಕೃತ್ಯಕ್ಕೆ ಕಾರಣರಾದವರ ಒಬ್ಬೊಬ್ಬರನ್ನೂ ಬೇಟೆಯಾಡುವವರೆಗೂ ವಿರಮಿಸುವುದಿಲ್ಲ ಎಂದು ಗುಡುಗಿದ್ದಾರೆ.

ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ), ಸ್ಫೋಟಕ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೇರಿದಂತೆ ವಿವಿಧ ಕಠಿಣ ನಿಬಂಧನೆಗಳ ಅಡಿಯಲ್ಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ್ದಾರೆ.
ದೆಹಲಿ ಕಾರು ಸ್ಫೋಟ ಪ್ರಕರಣದಲ್ಲಿ ನಿನ್ನೆಯಿಂದ ಸ್ಥಳೀಯ ಪೊಲೀಸರೊಂದಿಗೆ ಸಂಬಂಧ ಹೊಂದಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ), ಗೃಹ ಸಚಿವಾಲಯವು ಪ್ರಕರಣದ ತನಿಖೆಯನ್ನು ಸಂಸ್ಥೆಗೆ ಹಸ್ತಾಂತರಿಸುವ ಆದೇಶಗಳನ್ನು ಹೊರಡಿಸಿದ ನಂತರ ಪ್ರಕರಣವನ್ನು ಔಪಚಾರಿಕವಾಗಿ ವಹಿಸಿಕೊಳ್ಳುವ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post