ನವದೆಹಲಿ: ಇಲ್ಲಿನ ಮೋತಿ ಭಾಗ್’ನಲ್ಲಿರುವ ಸುದರ್ಶನ್ ಪಾರ್ಕ್’ನಲ್ಲಿ ಕಾರ್ಯಾನೆಯೊಂದರ ಕಟ್ಟಡ ಕುಸಿದುಬಿದ್ದ ಪರಿಣಾಮ ಏಳು ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡ ಘಟನೆ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ತಡರಾತ್ರಿ ಘಟನೆ ಸಂಭವಿಸಿದ್ದು, ತತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ವೇಳೆ ಮೃತರಾದವರ ಶವಗಳನ್ನು ಹೊರತೆಗೆಯಾಗಿದೆ.
ಇನ್ನು ಎನ್’ಡಿಆರ್’ಎಫ್ ಯೋಧರು ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಎಲ್ಲರನ್ನೂ ಹೊರತೆಗೆಯಲಾಗಿದ್ದು, ಇನ್ನು ಅಡಿಯಲ್ಲಿ ಯಾರೂ ಉಳಿದಿಲ್ಲ ಎಂದು ಖಚಿತಪಡಿಸಿಕೊಂಡ ತಂಡ, ರಕ್ಷಣಾ ಕಾರ್ಯವನ್ನು ಮುಕ್ತಾಯಗೊಳಿಸಿದೆ.
ಪ್ರಾಥಮಿಕ ವರದಿಯಂತೆ ಎಲ್’ಪಿಜಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಕಟ್ಟಡ ಕುಸಿತವಾಗಿದೆ ಎಂದು ವರದಿಯಾಗಿದ್ದು, ಈ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ.
Discussion about this post