ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ #ArvindKejriwal ಅವರನ್ನು ಮಾರ್ಚ್ 28ರವರೆಗೂ ಅಂದರೆ ಆರು ದಿನಗಳ ಕಾಲ ಇಡಿ #ED ಕಸ್ಟಡಿಗೆ ವಹಿಸಲಾಗಿದೆ.
ಈ ಕುರಿತಂತೆ ದೆಹಲಿ ಹೈಕೋರ್ಟ್ ಇಂದು ರಾತ್ರಿ ಆದೇಶ ಹೊರಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಆರು ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ ಎಂದಿದೆ.

ಇಂದು ಮಧ್ಯಾಹ್ನ ಬಿಗಿ ಭದ್ರತೆಯಲ್ಲಿ ಕೇಜ್ರಿವಾಲ್ ಅವರನ್ನು ರೋಸ್ ಅವೆನ್ಯೂ ರಸ್ತೆಯಲ್ಲಿರುವ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಇಡಿ ಕೋರಿತ್ತು. ಆದರೆ, ನ್ಯಾಯಾಲಯ ಆರು ದಿನಗಳ ಕಾಲ ಮಾತ್ರ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post