ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಅಸ್ಸಾಂ: ಕ್ವಾರಂಟೈನ್’ನಲ್ಲಿ ಇರಿಸಲಾಗಿರುವ ಕೊರೋನಾ ವೈರಸ್ ಶಂಕಿತ19ನ ನಿಜಾಮುದ್ದೀನ್ ಜಮಾತ್ ಸದಸ್ಯರು ಆಸ್ಪತ್ರೆಯ ಎಲ್ಲೆಂದರಲ್ಲಿ ಉಗುಳುತ್ತಿದ್ದು, ವೈದ್ಯರಿಗೆ ಹಾಗೂ ಭದ್ರತಾ ಸಿಬ್ಬಂದಿಗಳಿಗೆ ತಲೆ ನೋವಾಗಿ ಪರಿಣಮಿಸಿದೆ.
ಅಲ್ಲಿನ ಆರೋಗ್ಯ ಸಚಿವ ಹಿಮಂತ್ ಬಿಸ್ವಾ ಅವರ ಇಂದು ಸಂಜೆ ಆಸ್ಪತ್ರೆಗೆ ಭೇಟಿ ನೀಡಲಿದ್ದು, ಇದಕ್ಕೂ ಮುನ್ನ ಈ ರೀತಿ ಆರೋಪಿಸಲಾಗಿದೆ.
ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಪಾಲ್ಗೊಂಡಿದ್ದ ಎಂಟು ಮಂದಿ ಸೇರಿದಂತೆ ಒಟ್ಟು 19 ಮಂದಿಯನ್ನು ಕ್ವಾರಂಟೈನ್’ನಲ್ಲಿ ಇರಿಸಲಾಗಿದೆ. ಇವರಲ್ಲಿ ಕೋವಿಡ್ ಸೋಂಕಿತ ರೋಗಿಗಳು ತಮಗೆ ಚಿಕಿತ್ಸೆ ನೀಡಲು ಬರುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಮೇಲೆ ಉಗುಳುತ್ತಿದ್ದಾರೆ. ಅಲ್ಲದೇ, ಆಸ್ಪತ್ರೆಯ ಕಂಡ ಕಂಡಲ್ಲಿ ಉಗುಳುತ್ತಿದ್ದು, ಸೋಂಕು ಹೆಚ್ಚಾಗುವ ಆತಂಕ ಎದುರಾಗಿದೆ.
ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸಾದ ನಾಲ್ವರನ್ನು ಪರೀಕ್ಷೆಗೊಳಪಡಿಸಿದ್ದು, ಕೋವಿಡ್ 19 ವೈರಸ್ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಅಸ್ಸಾಂನಲ್ಲಿ ಕೋವಿಡ್ ಸೋಂಕು ಪೀಡಿತರ ಸಂಖ್ಯೆ 20ಕ್ಕೆ ಏರಿದಂತಾಗಿದೆ.
Get in Touch With Us info@kalpa.news Whatsapp: 9481252093







Discussion about this post