ಬೆಂಗಳೂರು: ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ನಟ ಪ್ರಕಾಶ್ ರೈ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುವಂತೆ ಹಿಂದೂ ಮಹಾಸಭಾದಿಂದ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಹಿಂದೂ ದೇವರ ಹಾಗೂ ಧರ್ಮದ ಕುರಿತಾಗಿ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಪ್ರಕಾಶ್ ರೈ ಅವರಿಂದ ಭಾವನೆಗಳಿಗೆ ಧಕ್ಕೆಯಾಗಿದೆ. ಹೀಗಾಗಿ, ಕನ್ನಡ ಚಿತ್ರರಂಗದಿಂದ ಅವರನ್ನು ಬ್ಯಾನ್ ಮಾಡಬೇಕು ಎಂದು ಒತ್ತಾಯಿಸಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಪ್ರಕಾಶ್ ರೈ, ರಾಮಾಯಣದಲ್ಲಿ ಬರುವ ರಾಮ-ಲೀಲಾ ಬಗ್ಗೆ ಮಾತನಾಡುತ್ತಾ, ಅದಕ್ಕೆ ಪೋರ್ನ್ ಸೈಟ್ ಬಗ್ಗೆ ಉದಾಹರಣೆ ನೀಡಿದ್ದು ಚರ್ಚೆಗೆ ಗ್ರಾಸವಾಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
Discussion about this post