ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ದಾರುಣ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ನಿನ್ನೆ ತಡರಾತ್ರಿ ಈ ಕ್ರೂರ ಘಟನೆ ನಡೆದಿದ್ದು, ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಮನುಷ್ಯ ರೂಪದ ರಾಕ್ಷಸರು ಕೊಯ್ದು ಕ್ರೂರತೆ ಮೆರೆದಿದ್ದಾರೆ.
Also Read>> ಸೊರಬ ಶ್ರೀ ರಂಗನಾಥ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆಯಲ್ಲಿ ಹೊಸ ದಿಕ್ಕು
ಜಾನುವಾರುಗಳ ಘೋರ ಶಬ್ದದಿಂದ ಎಚ್ಚರಗೊಂಡ ನಿವಾಸಿಗಳು, ಹಸುಗಳು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.
ರಾತ್ರಿಯಿಡೀ ಹಸುಗಳು ರಕ್ತದ ಮಡುವಿನಲ್ಲಿ ನರಳಾಡಿವೆ. ಇಂದು ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಸದ್ಯ ಹಸುಗಳಿಗೆ ಚಾಮರಾಜೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Also Read>> ಬೆಂಗಳೂರು | ಬಿಎಂಶ್ರೀ ಕಲಾಭವನದಲ್ಲಿ ಕಲಾರಸಿಕರಿಗೆ ಭಾವಗೀತೆಗಳ ರಸದೌತಣ
ಘಟನೆ ಹಿನ್ನೆಲೆಯಲ್ಲಿ ಈ ಬಡಾವಣೆಯಲ್ಲಿ ಪರಿಸ್ಥಿತಿ ಬಿಗಡಾಯಿಸಿದೆ. ಸ್ಥಳೀಯರು ದುಷ್ಟರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಹಸುಗಳು ಸ್ಥಳೀಯರಾದ ಕರ್ಣ ಎಂಬುವವರಿಗೆ ಸೇರಿದ್ದಾಗಿವೆ.
ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ಇನ್ನು ಘಟನೆ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪ್ರಕರಣದ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ ಅವರಿಗೆ ಸೂಚಿಸಿದ್ದೇನೆ ಎಂದಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಹೇಳಿದ್ದೇನೆ. ಯಾರೇ ಕೃತ್ಯ ಎಸಗಿದ್ದರು ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post