ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 803 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ಜಿಲ್ಲಾಡಳಿತ ಮಾಹಿತಿ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಂದು ಒಟ್ಟು 2093 ಮಂದಿಯ ಪರೀಕ್ಷೆ ನಡೆಸಲಾಗಿದ್ದು, 707 ನೆಗೆಟಿವ್ ಹಾಗೂ 803 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.ಇಂದು 577 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟಾರೆಯಾಗಿ ಇಂದು 5 ಮಂದಿ ಸಾವಿಗೀಡಾಗಿದ್ದಾರೆ.
ಇಂದು 610 ಮಂದಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದು, ಕೋವಿಡ್ ಕೇರ್ ಸೆಂಟರ್’ನಲ್ಲಿ 363 ಮಂದಿ, ಖಾಸಗಿ ಆಸ್ಪತ್ರೆಯಲ್ಲಿ ಇಂದು 538 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇಂದು 4711 ಮಂದಿ ಹೋಮ್ ಐಸೋಲೇಶನ್’ನಲ್ಲಿ ಆಗಿದ್ದಾರೆ.ತಾಲೂಕುವಾರು ವಿವರ:
ಶಿವಮೊಗ್ಗ: 178
ಭದ್ರಾವತಿ: 68
ಶಿಕಾರಿಪುರ: 115
ತೀರ್ಥಹಳ್ಳಿ: 113
ಸೊರಬ: 74
ಸಾಗರ: 152
ಹೊಸನಗರ: 52
ಇತರೆ ಜಿಲ್ಲೆ: 11
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post