ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಅನಾನಸ್ ಮತ್ತಿತರೆ ತೋಟಗಾರಿಕೆ ಬೆಳೆಗಳು ನಾಶವಾಗುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂಸದ ಬಿ.ವೈ. ರಾಘವೇಂದ್ರ ಅವರು ಈ ಕುರಿತಂತೆ ಚರ್ಚಿಸಿದರು.
ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಪೈಕಿ ಪ್ರಮುಖವಾಗಿ ಸೊರಬ, ಸಾಗರ ತಾಲೂಕುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಾವಿರಾರು ರೈತರು ಲಕ್ಷಾಂತರ ಟನ್ ಅನಾನಸ್ ಬೆಳೆಯನ್ನು ಬೆಳೆದಿದ್ದು, ಕೊವೀಡ್ ಲಾಕ್ ಡೌನ್ ನಿಂದಾಗಿ ಕಟಾವಿಗೆ ಬಂದಿರುವ ಮೊದಲ ಹಂತದ ಅನಾನಸ್ ಬೆಳೆಗೆ ಸೂಕ್ತ ಮಾರುಕಟ್ಟೆ ಸೌಲಭ್ಯವಿಲ್ಲದೇ ಹಾಳಾಗುತ್ತಿರುವುದರ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ತೋಟಗಾರಿಕೆ ಉಪ ನಿರ್ದೇಶಕರೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.
ಈ ಬಗ್ಗೆ ಜಿಲ್ಲಾಡಳಿತ ವತಿಯಿಂದ ಕಟಾವಿಗೆ ಬಂದಿರುವ ಅನಾನಸ್ ಬೆಳೆಯನ್ನು ಯಾವ ರೀತಿ ವಿಲೇವಾರಿ ಮಾಡಬಹುದೆಂಬುದರ ಬಗ್ಗೆ ಕೂಡಲೇ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಯಿತು.
Get in Touch With Us info@kalpa.news Whatsapp: 9481252093
















